Wednesday, April 10, 2024

ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

ಬಂಟ್ವಾಳ: ಮಾ24 ವಿದ್ಯಾರ್ಥಿಯಾದವನು ತನ್ನ ಕಲಿಕೆಯ ಸಮಯದಲ್ಲಿ ವಿಶೇಷ ಆಸಕ್ತಿಯೊಂದಿಗೆ ಅಹರ್ನಿಶಿ ಪ್ರಯತ್ನವನ್ನು ಮಾಡಬೇಕು ಆಧುನಿಕ ಆಕರ್ಷಣೆಯಿಂದ ತನ್ನ ಕರ್ತವ್ಯದ ಕಡೆ ಗಮನ ನೀಡಬೇಕು. ಓರ್ವ ವಿದ್ಯಾರ್ಥಿ ಉತ್ತಮ ಫಲಿತಾಂಶ ಪಡೆಯುವಲ್ಲಿ ಆತನ ದುಡಿಮೆಯೊಂದಿಗೆ ಪೋಷಕರ ಮತ್ತು ಶಿಕ್ಷಕರ ಜವಾಬ್ದಾರಿಯು ಅಷ್ಟೇ ಮುಖ್ಯವಾದುದು. ಎಂದು ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ಹೇಳಿದರು
ಅವರು ಇಂದು ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಂಸ್ಥೆಯೊಂದರಲ್ಲಿರುವ ನಿಯಾಮಾವಳಿಗಳು ಇರುವುದು ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಅದನ್ನು ಪಾಲಿಸಿ ಕಲಿತವರಿಗೆ ಯಶಸ್ಸು ನಿಶ್ಚಿತ. ಆದರೆ ಮೊಬೈಲ್ ನಂತಹ ಆಧುನಿಕ ಸಾಧನಗಳು ಇಂದು ಮಕ್ಕಳ ಮನೋಸ್ಥಿತಿ ಹಾಳು ಮಾಡುತ್ತಿರುವುದು ವಿಷಾದನೀಯ. ಹೋಸ ಜೀವನ ಶೈಲಿಯ ಕಡೆಗೆ ತಿರುಗಿದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ವಿದ್ಯಾರ್ಥಿ ಉತ್ತಮ ಫಲಿತಾಂಶ ಪಡೆದಾಗ ಆತನ ಸಂತೋಷದೊಂದಿಗೆ ಹೆತ್ತವರಿಗೆ ಮತ್ತು ಕಾಲೇಜಿಗೆ ಕೀರ್ತಿ ಬರುತ್ತದೆ ಎಂದವರು ಹೇಳಿದರು. ಕಾಲೇಜಿನಲ್ಲಿ ಇವರೆಗೆ ನಡೆದ ಕಾರ್ಯಕ್ರಮಗಳು ಮತ್ತು ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ 2017-18ನೇ ಸಾಲಿನ ಬಿ.ಎಸ್ಸಿ ಪರೀಕ್ಷೆಯಲ್ಲಿ 4ನೇ ರ್‍ಯಾಂಕ್ ಗಳಿಸಿದ ಸುರಕ್ಷಾ ಮತ್ತು 9ನೇ ರ್‍ಯಾಂಕ್ ಗಳಿಸಿದ ನತಾಷಾ ಜಾಸ್ಮಿನ್ ಡಿಸೋಜ ಇವರನ್ನು ಮತ್ತು ಪಿ.ಎಚ್.ಡಿ ಪದವಿ ಪಡೆದ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿಯಾದ ಡಾ| ದಾಕ್ಷಯಿಣಿ ಹಾಗೂ ಕಾಲೇಜಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾಥಿಗಳು ಮತ್ತು ಸ್ಟೂಡೆಂಟ್ ಫೆಕಲ್ಟಿ ತರಗತಿ ನಡೆಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ರೊನಾಲ್ಡ್ ಡಿಸೋಜ ಮಹಾಸಭೆಯ ಅಧ್ಯಕ್ಷತೆ ವಹಿಸಿ ವರದಿ ವರ್ಷದಲ್ಲಿ ತನಗೆ ಕೊಟ್ಟ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಸಂಘದ ನೂತನ ಕಾರ್ಯಕಾರಿ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು. ಅಧ್ಯಕ್ಷರಾಗಿ ರೊನಾಲ್ಡ್ ಡಿಸೋಜ ಪುನರಾಯ್ಕೆಯಾದರು. ಉಪಪ್ರಾಂಶುಪಾಲೆ ಡಾ| ಎಚ್ ಆರ್ ಸುಜಾತ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮ ಪಾಲಕ ಪ್ರೊ ನಾರಾಯಣ ಭಂಡಾರಿ ವಂದಿಸಿದರು. ಪ್ರೊ ನಾರಾಯಣ ಭಂಡಾರಿ ನೂತನ ಕಾರ್ಯಕಾರಿ ಸಮಿತಿಯ ರಚನೆಯನ್ನು ನಿರ್ವಹಿಸಿದರು.  ಶಾಂತಿ ರೋಚಿ  ಸಕೀನಾ ನಾಝಿರ್ ಪುರಸ್ಕಾರಗೊಂಡ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಕಿಟ್ಟು ರಾಮಕುಂಜ ಕಾರ್ಯಕ್ರಮ ನಿರೂಪಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...