ವಿಟ್ಲ: ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 42 ವರ್ಷಗಳಿಂದ ದೈಹಿಕ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸಿದ ಮಲ್ಲಿಕಾ ಹೆಗ್ಡೆ ನಿವೃತ್ತಿಯಾಗಿದ್ದು, ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು.
ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆದ ಈ ಸಮಾರಂಭದ ಅಧ್ಯಕ್ಷತೆಯನ್ನು ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ವಹಿಸಿದ್ದರು. ಅತಿಥಿಗಳಾಗಿ ಸಂಚಾಲಕ ಎಲ್.ಎನ್ ಕೂಡೂರು, ಕಾರ್‍ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯರುಗಳಾದ ಪದ್ಮಯ್ಯ ಗೌಡ ಮತ್ತು ಬಾಬು ಕೆ.ವಿ ಹಾಗೂ ನಂದ ವರ್ಮ ವಿಟ್ಲ ಅರಮನೆ ಇವರು ಭಾಗವಹಿಸಿದ್ದರು.
ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ವಂದಿಸಿದರು. ಅಧ್ಯಾಪಕ ರಮೇಶ್ ಬಿ.ಕೆ ನಿರೂಪಿಸಿದರು. ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


