Saturday, April 6, 2024

ಬೀಕರ ಅಪಘಾತಕ್ಕೆ ಇಬ್ಬರು ಮಹಿಳೆಯರು ಮೃತರಾಗಿದ್ದಾರೆ.

ಬಂಟ್ವಾಳ: ಬಿಸಿರೋಡಿನ ಪಾಣೆಮಂಗಳೂರು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರ್ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಯಲ್ಲಿ ಇಬ್ಬರು ಮಹಿಳೆಯರು ಮೃತರಾಗಿದ್ದಾರೆ.

ಪಾಣೆಮಂಗಳೂರಿನ ಹಳೆಟೋಲ್ ಗೇಟ್ ಸಮೀಪ ಮಧ್ಯಾಹ್ನ ದ ವೇಳೆ ಅಪಘಾತ ಸಂಭವಿಸಿತ್ತು.
ಪುತ್ತೂರುವಿನಿಂದ   ಮಂಗಳೂರು ಕಡೆಗೆ ತೆರಳುತ್ತಿದ್ದ  ಕೆಎಸ್ಸಾರ್ಟಿಸಿ ಬಸ್ ಬಿಸಿರೋಡು ಕಡೆಯಿಂದ ಬರುತ್ತಿದ್ದ ಸೆಲೆರಿಯಾ ಕಾರಿಗೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ಇಬ್ಬರು ಗಂಬೀರ ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡ ಒಬ್ಬರು ಮಹಿಳೆ ಹಾಗೂ ಚಾಲಕ ನನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಮಂಗಳೂರು
ನಿವಾಸಿಗಳಾದ ರುಕ್ಮಿಣಿ ಹಾಗೂ ಸರೋಜಿನಿ
ಮೃತರಾದವರು.
ಚಾಲಕ ಉಮೇಶ್ ಹಾಗೂ ಅನುಷಾ ಅವರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಅಗಿದ್ದು ಒರ್ವ ಮಹಿಳೆ ಸ್ಥಳದಲ್ಲಿ ಯೇ ಮೃತಪಟ್ಟರೆ ಇನ್ನೋಬ್ಬರು ಮಹಿಳೆ ಆಸ್ಪತ್ರೆ ಗೆ ಸಾಗಿಸುವ ವೇಳೆ ದಾರಿಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಕುಟುಂಬ ಪಾಣೆಮಂಗಳೂರು ಸಮೀಪದ ಶಂಭೂರಿನಲ್ಲಿರುವ ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮ ಕ್ಕೆ ತೆರಳುವ ವೇಳೆ ಯಮದೂತನಂತೆ ಬಂದ ಕೆ.ಎಸ್.ಆರ್.ಟಿ.ಸಿ.ಬಸ್
ಇವರ ಬಲಿ ತೆಗೆದುಕೊಂಡಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಶರಣ್ ಗೌಡ, ಬಂಟ್ವಾಳ
ಟ್ರಾಫಿಕ್ ಠಾಣಾ ಎಸ್.ಐ. ಮಂಜುನಾಥ್ , ಎ.ಎಸ್.ಐ.ಕುಟ್ಟಿ, ಹೆಚ್.ಸಿ.ಮನೋಹರ್
ದಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಸಮಯ ಟ್ರಾಫಿಕ್ ಉಂಟಾಗಿತ್ತು

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...