Wednesday, October 25, 2023

ಅಂಬೇಡ್ಕರ್ ಅವರಿಗೆ ಅವಮಾನ: ಕಾನೂನು ಕ್ರಮಕ್ಕೆ ಒತ್ತಾಯ

Must read

ಬಂಟ್ವಾಳ, ಎ. ೧೩: ಶಾಲೆಯೊಂದರಲ್ಲಿ ಅಂಬೇಡ್ಕರ್ ಜಯಂತಿಯನ್ನು ಮುಂಗಡವಾಗಿ ಆಚರಿಸಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ದಲಿತ ಮುಖಂಡರು ಬಂಟ್ವಾಳ ಎಎಸ್ಪಿ ಅವರಿಗೆ ಶನಿವಾರ ದೂರು ನೀಡಿದ್ದಾರೆ.
ದಲಿತ ಮುಖಂಡರಾದ ಜನಾರ್ದನ ಚೆಂಡ್ತಿಮಾರ್ ಹಾಗೂ ರಾಜೀವ ಕಕ್ಯಪದವು ಅವರು ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್ ಅವರಿಗೆ ಜಂಟಿ ದೂರು ನೀಡಿದ್ದಾರೆ.
ಪಂಜಿಕಲ್ಲು ಮೂಡನಡುಗೋಡು ವ್ಯಾಪ್ತಿಯಲ್ಲಿರುವ ದಡ್ಡಲಕಾಡು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎ.೧೩ರಂದು ಅಂಬೇಡ್ಕರ್ ಜಯಂತಿಯನ್ನು ಆಚರಿಸುವ ಮೂಲಕ ಅಂಬೇಡ್ಕರ್ ಹಾಗೂ ಅವರ ಅಭಿಮಾನಿಗಳಿಗೆ ಮಾಡಿರುವ ಅವಮಾನವಾಗಿದೆ. ಈ ನಿಟ್ಟಿನಲ್ಲಿ ದಡ್ಡಲಕಾಡು ಸರಕಾರಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಶಾಲಾ ಮುಖ್ಯೋಪಾಧ್ಯಾಯರ ಮೇಲೆ ಪ.ಜಾತಿ-ಪ.ಪಂಗಡ ದೌರ್ಜನ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಪೊಲೀಸ್ ದೂರಿನಲ್ಲಿ ಒತ್ತಾಯಿಸಲಾಗಿದೆ.

More articles

Latest article