ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ವ್ಯಾಪ್ತಿಯ ಕಾಂಗ್ರೆಸ್ ಬೂತ್ ಗಳಿಗೆ ಕೆಪಿಸಿಸಿ ಕಾರ್ಯದರ್ಶಿ, ಹಿರಿಯ ನ್ಯಾಯವಾದಿ ಎ. ಅಶ್ವನಿ ಕುಮಾರ್ ರೈ ಇಂದು ಭೇಟಿ ನೀಡಿದರು.
ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ
ಚರ್ಚಿಸಿ ಮತದಾನ ಪ್ರಕ್ರಿಯೆಯನ್ನು ಅವಲೋಕನ ನಡೆಸಿದರು.


ಬಂಟ್ವಾಳ ಪುರಸಭಾಧಿಕಾರಿಗಳು ವ್ಯಾಪ್ತಿಯ ಪಲ್ಲಮಜಲು, ಪರ್ಲಿಯಾ, ನಂದರಬೆಟ್ಟು, ಶಾಂತಿಯಂಗಡಿ ಮತ್ತಿತರ ಕಡೆಗಳ ಮತಕಟ್ಟೆ ವ್ಯಾಪ್ತಿಯಲ್ಲಿರುವ ಪಕ್ಷದ ಬೂತ್ ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೂ ಈ ಸಂದರ್ಭ ಭೇಟಿ ಪಕ್ಷದ ಮುಖಂಡರೊಂದಿಗೆ ಮಾತನಾಡಿದರು. ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು, ತಾಲೂಕು ಪಂಚಾಯಿತಿ ಸದಸ್ಯರು, ಪುರಸಭಾ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಮತ ಚಲಾಯಿಸಲು ಪ್ರೋತ್ಸಾಹಿಸಿ:
ಬಂಟ್ವಾಳ, ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಮತ ಚಲಾಯಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,
ಮತದಾನ ಪ್ರತಿಯೊಬ್ಬ ನಾಗರಿಕರ ಹಕ್ಕು. ಈ ಹಕ್ಕು ಚಲಾಯಿಸುವ ಜತೆಗೆ ಇನ್ನೊಬ್ಬರನ್ನು ಮತ ಚಲಾಯಿಸುವಂತೆ ಪ್ರೋತ್ಸಾಹಿಸುವ ನಾಗರಿಕರ ಕರ್ತವ್ಯವಾಗಿದೆ ಎಂದು ಪ್ರತಿಕ್ರಿಯಿಸಿದರು.
ಪ್ರಜ್ಞಾವಂತ ಅಭ್ಯರ್ಥಿಗಳನ್ನು ಲೋಕ ಸಭೆಗೆ ಚುನಾಯಿಸುವ ಈ ಚುನಾವಣೆ ಅತ್ಯಂತ ಮಹತ್ವದಾಗಿದ್ದು, ಜನರು ಈ ಬಾರಿ ಮಹತ್ವ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಬದಲಾವಣೆ ಬಯಸಿದ್ದಾರೆ ಎಂದು ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here