Friday, April 12, 2024

ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್: ಮೇ 5ರಂದು ಪದಗ್ರಹಣ, ಚುಟುಕು ಕವಿಗೋಷ್ಠಿ

ವಿಟ್ಲ: ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸಾಹಿತಿ ರಾಜಾರಾಮ ವರ್ಮ ವಿಟ್ಲ, ಗೌರವಾಧ್ಯಕ್ಷರಾಗಿ ಸಾಹಿತಿ
ವಿ. ಸುಬ್ರಹ್ಮಣ್ಯ ಭಟ್ ತುಂಬೆ ಹಾಗೂ ಕಾರ್ಯದರ್ಶಿಯಾಗಿ ಸುರೇಖಾ ಎಳವಾರ್ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಮಹೇಶ್‌ ನೆಟ್ಲ,
ಜ್ಯೋತಿ ರವಿರಾಜ್ ಹಾಗೂ ಸೀತಾಲಕ್ಷ್ಮೀ ವರ್ಮ ವಿಟ್ಲ ನೇಮಕವಾಗಿದ್ದು, ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ
ಚುಟುಕು ಕವಿಗೋಷ್ಠಿ ಕಾರ್ಯಕ್ರಮವು ಮೇ 5ರಂದು ವಿಟ್ಲದ ವಿಠಲ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.


ಪೂರ್ವಾಹ್ನ 10ಕ್ಕೆ ನಡೆಯುವ ಪದಗ್ರಹಣ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಇರಾ ನೇಮು
ಪೂಜಾರಿ ಉದ್ಘಾಟಿಸುವರು. ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ, ವಿಶ್ರಾಂತ ಯೋಧ ಮತ್ತು ಚಲನಚಿತ್ರ ನಟ ತಾರಾನಾಥ
ಬೋಳಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹರೀಶ್
ಸುಲಾಯ ಒಡ್ಡಂಬೆಟ್ಟು ಉಪಸ್ಥಿತರಿರುವರು. ಬಳಿಕ ಸಾಹಿತಿ ಶಿವಕುಮಾರ ಸಾಯ ಅವರ ಅಧ್ಯಕ್ಷತೆಯಲ್ಲಿ ಚುಟುಕು ಕವಿಗೋಷ್ಠಿ
ನಡೆಯಲಿದೆ ಎಂದು ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

More from the blog

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...