ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಮುಂಬರುವ ಬ್ರಹ್ಮ ಕಲಶೋತ್ಸವ ಇತ್ಯಾದಿ ಕಾರ್ಯಕ್ರಮಗಳ ಬಗ್ಗೆ ಪೂರ್ವಭಾವಿ ಸಮಾಲೋಚನ ಸಭೆ ಕ್ಷೇತ್ರದ ವಠಾರದಲ್ಲಿ ಎ.23ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
