Wednesday, April 10, 2024

ವಿಟ್ಲ ಗ್ರಾಮೀಣ ಬ್ಯಾಂಕ್ ನಿವೃತ್ತ ಸಿಬ್ಬಂದಿ ಬೀಳ್ಕೊಡುಗೆ

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನಲ್ಲಿ 39 ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಾಜೇಶ್ವರಿ ಅವರ ಬೀಳ್ಕೊಡುಗೆ, ಗೌರವ ಸಮಾರಂಭ ಶುಕ್ರವಾರ ಬ್ಯಾಂಕಿನ ವಠಾರದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಎಲ್.ಎನ್.ಕೂಡೂರು ಮಾತನಾಡಿ ಸಿಬ್ಬಂದಿಗಳ ವಿನಯ, ವಿಧೇಯತೆಯ ಗ್ರಾಹಕ ಸೇವೆಯಿಂದ ಸಹಕಾರಿ ಬ್ಯಾಂಕ್‌ಗಳ ಆರ್ಥಿಕ ವ್ಯವಹಾರ ಪ್ರಗತಿ ಸಾಧಿಸುತ್ತಲೇ ಸಾಗುತ್ತದೆ. ರಾಜೇಶ್ವರಿ ಅವರ ಕರ್ತವ್ಯನಿಷ್ಠೆ ಪ್ರಾಮಾಣಿಕತೆ ಸದಾ ನೆನಪಿನಲ್ಲಿ ಉಳಿಯುವಂತಾಗಿದೆ ಎಂದು ತಿಳಿಸಿದರು.
ನಿವೃತ್ತರ ಪರವಾಗಿ ಬ್ಯಾಂಕಿನ ನಿರ್ದೇಶಕ ಎ.ಅನಂತಭಟ್, ಮುಖ್ಯ ಕಾರ್‍ಯ ನಿರ್ವಾಹಕ ಮೋನಪ್ಪ ಗೌಡ ಸೇರಾಜೆ, ಶ್ರೀಕಾಂತ್, ಸೇಲ್ಸ್ ಅಧಿಕಾರಿ ಸವಿತ ನಾಗರಾಜ್, ಇಂಜಿನಿಯರ್ ರಾಘವೇಂದ್ರ ಪೈ, ಸುರೇಶ್ ಬನಾರಿ, ನಿವೃತ್ತ ಮುಖ್ಯ ಕಾರ್‍ಯ ನಿರ್ವಹಣಾಧಿಕಾರಿ ವಿ.ಎಸ್.ಕೆದಿಲಾಯ, ಶಿವಣ್ಣ ಮಾತನಾಡಿದರು. ನಿವೃತ್ತರ ಪತಿ, ಜೆಸಿಐ ರಾಷ್ಟ್ರೀಯ ತರಬೇತುದಾರ ಶ್ರೀಧರ ಕೊಡಕ್ಕಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಉಪಾಧ್ಯಕ್ಷ ಜಗನ್ನಾಥ ಹೆಚ್. ಸಾಲ್ಯಾನ್, ನಿರ್ದೇಶಕರಾದ ಹರೀಶ್ ನಾಯಕ್ ವಿಟ್ಲ, ದಿನೇಶ್ ವಿಟ್ಲ, ಮನೋರಂಜನ್ ಕೆ.ಆರ್. ಕರೈ, ಉದಯ ಕುಮಾರ್ ಆಲಂಗಾರು, ಗೀತಾ ವಿಟ್ಲ, ಪ್ರೀತಾ ಭಟ್ ಕೆ.
ನಿರ್ದೇಶಕ ಪ್ರಕಾಶ್ ಕೆ.ಎಸ್. ಸ್ವಾಗತಿಸಿದರು. ವಿಶ್ವನಾಥ ಎಂ. ವೀರಕಂಭ ವಂದಿಸಿದರು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...