Saturday, April 6, 2024

ಪವಾಡ ಪುರುಷ ಸಂತ ಅಂತೋನಿ ಚರ್ಚ್‌ಗೆ ಮಿಥುನ್ ರೈ ಭೇಟಿ ಗುರುಗಳಿಂದ ವಿಶೇಷ ಪೂಜೆ

ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ ಜೊತೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಗುರುವಾರ ಬಂಟ್ವಾಳ ಸುತ್ತಮುತ್ತ ಪ್ರಚಾರವನ್ನು ನಡೆಸಿದ ಅವರು ತಾಲೂಕಿನ ಸುತ್ತಮುತ್ತವಿರುವ ಹಲವು ದೇವಸ್ಥಾನ, ದೈವಸ್ಥಾನ ,ಚರ್ಚ್‌ಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದಿದ್ದಾರೆ. ಜೊತೆಗೆ ಇಲ್ಲಿಯ ಜನ ಮಿಥುನ್ ರೈಗೆ ಮಣೆ ಹಾಕುವ ಲಕ್ಷಗಳು ಎದ್ದು ಕಾಣುತ್ತಿದೆ.. ಇನ್ನು ಗುರುಬಲವೊಂದಿದ್ದರೆ ಎಂಥಹ ಯುದ್ದವನ್ನು ಗೆದ್ದು ಬರುವ ಶಕ್ತಿ ಮನುಷ್ಯನಿಗಿದೆ ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಮಿಥುನ್ ರೈ ಗೆದ್ದು ಬರಲಿ ಎಂಬ ನಿಟ್ಟಿನಲ್ಲಿ ಹಲವು ಚರ್ಚ್‌ಗಳ ಫಾದರ್ ಆಶೀರ್ವಾದ ನೀಡಿದ್ದಾರೆ.

ಬಂಟ್ವಾಳದಲ್ಲಿಯೇ ಇರುವ ಪವಾಡ ಪುರುಷ ಸಂತ ಅಂತೋನಿ ಚರ್ಚ್‌ನ ಗುರುಗಳಾದ ಫೆಡ್ರಿಕ್ ಮೊಂತೆರೋ ಮತ್ತು ವಂದನೀಯ ಸ್ಟೇನಿ ಫೆರ್ನಾಂಡೀಸ್ ಮಿಥುನ್ ರೈ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಈ ಸಂದರ್ಭದಲ್ಲಿ ಚರ್ಚ್‌ನ ಪಾಲನಾ ಮಂಡಳಿಯ ಫೆರ್ನಾಡೀಸ್ ಮಾಡ್ತೀನಿಸಿಕ್ವೇರ, ವಿನ್ಸೆಂಟ್ ಪಿಂಟೋ ರಿಚರ್ಡ್ ಡಿಸೋಜಾ , ಕಿರಣ್ ನೊರೊನ್ನಾ, ಡೆಂಜಿಲ್ ನೊರೊನ್ನಾ ಮಿಥುನ್ ಸಿಕ್ವೇರಾ ಉಪಸ್ಥಿತರಿದ್ದರು.. ಇದೇ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ ಕೂಡ ಆರ್ಶಿರ್ವಾದವನ್ನು ಪಡೆದರು .

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...