Wednesday, April 10, 2024

ಎರಡು ಕ್ಲಬ್ ಗೆ ದಾಳಿ: 148 ಅಧಿಕ ಮಂದಿ ವಶಕ್ಕೆ

ಬಂಟ್ವಾಳ: ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಎರಡು ರಿಕ್ರಿಯೇಷನ್ ಕ್ಲಬ್ ಗೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿ 148ಕ್ಕೂ ಅಧಿಕ ಮಂದಿಯನ್ನು ವಶ ಪಡಿಸಿರುವ ಘಟನೆ ಭಾನುವಾರ ಸಂಜೆ ನಡೆದಿದೆ.   ಜುಗಾರಿ ಹಾಗೂ ಇನ್ನಿತರ ಪರವಾನಗಿರಹಿತ ವಿಡೀಯೊ ಗೇಮಾಗಳನ್ನು ಆಡುತ್ತಿರುವ ಶಂಕೆ ಯ ಹಿನ್ನಲೆಯಲ್ಲಿ ಈ ದಾಳಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

  ಬಂಟ್ವಾಳ ಎಎಸ್ಪಿ ಸೈದುಲ್ ಅದಾವತ್ ಅವರ ನೇತೃತ್ವದಲ್ಲಿ ನಗರ ಠಾಣೆಯ ಎಸ್ ಐ ಚಂದ್ರ ಶೇಖರ್ ಮತ್ತವರ ತಂಡ ಪೊಲೀಸರು ಎರಡು ವಾಣಿಜ್ಯ ಸಂಕೀರ್ಣಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ಸಂದರ್ಭ ಎರಡು ಕ್ಲಬ್ ನಲ್ಲಿದ್ದ ಒಟ್ಟುಸುಮಾರು 148ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಅಲ್ಲದೆ ನಗದು, ಮೊಬೈಲ್, ಇಸ್ಪೀಟ್ ಎಲೆ ಮತ್ತಿತರ ಸೊತ್ತುಗಳನ್ನು ವಶ ಪಡಿಸಿದ್ದಾರೆ.

ಪೊಲೀಸ್ ಠಾಣೆಯ ಅನತಿದೂರದಲ್ಲಿಯೇ ಈ ವಾಣಿಜ್ಯ ಸಂಕೀರ್ಣಗಳಿವೆ ಈ ಎರಡರಲ್ಲಿ ಒಂದು ಅನಧಿಕೃತವಾಗಿ ನಡೆಯುತ್ತಿದೆ ಎಂದು ಹೇಳಲಾಗಿದೆ.  ದಾಳಿಯ ವೇಳೆ ಕ್ಲಬ್ ನಲ್ಲಿದ್ದ ಕೆಲವರು ತಮ್ಮ ಬಳಿಯಲ್ಲಿದ್ದ ನಗದು, ಚಿನ್ನಾಭರಣ, ಮೊಬೈಲ್ ಗಳನ್ನು ಮಹಡಿಯಿಂದ ಕೆಳಕ್ಕೆ ಎಸೆದಿದ್ದು, ಕೆಳ ಭಾಗದಲ್ಲಿ ಇದ್ದವರು ಇದನ್ನು ಹೆಕ್ಕಿ ಕೊಂಡ ಪ್ರಸಂಗವು ನಡೆಯಿತು.   ಈ ಸಂದರ್ಭ ವಾಣಿಜ್ಯ ಸಂಕೀರ್ಣದ ಹೊರಗೆ ಜನ ಜಮಾಯಿಸತೊಡಗಿದ್ದು, ಪೊಲೀಸ್ ಕಾರ್ಯಾಚರಣೆಯನ್ನು ಕುತೂಹಲದಿಂದ ವೀಕ್ಷಿಸುತ್ತಿರುವುದು ಕಂಡು ಬಂತು. ರಾತ್ರಿವರೆಗೂ ಕಾರ್ಯಾಚರಣೆ ನಡೆದಿದ್ದು, ವಿಚಾರಣೆಯ ಬಳಿಕವಷ್ಟೇ ಸ್ಪಷ್ಟ ಮಾಹಿತಿ ನೀಡಲಾಗುತ್ತದೆ ಎಂದು ಪೊಲೀಸ್ ಠಾಣಾ ಮಾಹಿತಿ ತಿಳಿಸಿದೆ.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...