Friday, October 20, 2023

ಲೋಕಸಭಾ ಚುನಾವಣೆ ಈ ಬಾರಿ ಮಿಥುನ್ ರೈ ಪರ ಜನರ ಬೆಂಬಲ: ರಮಾನಾಥ ರೈ

Must read

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಜನರ ಬೆಂಬಲ ವ್ಯಕ್ತವಾಗಿದ್ದು, ದ.ಕ. ಕ್ಷೇತ್ರದಿಂದ ಕಾಂಗ್ರೆಸ್ ಗೆಲ್ಲಿಸಿದರೆ ಬಡವರ ಪರ ಸೇವೆ ಮಾಡಲು ಅವಕಾಶವಾಗುತ್ತದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಂಟ್ವಾಳದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಎ. 11ರಂದು 2ನೆ ಹಂತದ
ಮಿಥುನ್ ರೈ ಅವರ ಬಹಿರಂಗ ಪ್ರಚಾರ ನಡೆಯಲಿದ್ದು, ಬೆಳಗ್ಗೆ 7ಕ್ಕೆ ಸರಪಾಡಿ, 7.30ಕ್ಕೆ ಕಕ್ಯಬೀಡು, 8 ಗಂಟೆಗೆ ಕಕ್ಯಪದವು, 8.30ಕ್ಕೆ ಕಾವಳಕಟ್ಟೆ, 9ಕ್ಕೆ ವಗ್ಗ, 9.15ಕ್ಕೆ ಕಾರಿಂಜ, 9.30ಕ್ಕೆ ಪೂಂಜ, 10ಕ್ಕೆ ಕೆರೆಬಳಿ,10.30ಕ್ಕೆ ಸಂಗಬೆಟ್ಟು, 10.45ಕ್ಕೆ ಕಲ್ಕುರಿ, 11 ಗಂಟೆಗೆ ಸಿದ್ದಕಟ್ಟೆಯ ವಿವಿಧೆಡೆ ಭೇಟಿ, 11.30ಕ್ಕೆ ಬಡ್ಡಕಟ್ಟೆಯಿಂದ ಬಸ್ತಿಪಡ್ಪುವರೆಗೆ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕರೋಪಾಡಿ, 3 ಗಂಟೆಗೆ ಕನ್ಯಾನದಲ್ಲಿ ಸಾರ್ವಜನಿಕ ಸಭೆ, 4 ಗಂಟೆಗೆ ಸಾಲೆತ್ತೂರಿನಲ್ಲಿ ಸಾರ್ವಜನಿಕ ಸಭೆ, ಸಂಜೆ 5ಕ್ಕೆ ನಂದಾವರ, ೬ಕ್ಕೆ ಗೂಡಿನಬಳಿಯಲ್ಲಿ ಪಾದಯಾತ್ರೆ ನಡೆಸಿ, 7ಕ್ಕೆ ಕೈಕಂಬ ಜಂಕ್ಷನ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್‌ವನ ಹಲವು ಕಾಯ್ದೆಗಳು ಜನರಿಗೆ ವರವಾದರೆ, ಬಿಜೆಪಿಯ ಯಾವುದೇ ಯೋಜನೆಗಳು ಜನರಿಗೆ ಲಾಭ ನೀಡದೆ ಕೇವಲ ಉದ್ಯಮಪತಿಗಳಿಗೆ ಉಪಕಾರವಾಗಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ.ಪದ್ಮಶೇಖರ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಶೆಟ್ಟಿ ಮಾಣಿ, ಮಾಜಿ ಅಧ್ಯಕ್ಷರುಗಳಾದ ಮಾಯಿಲಪ್ಪ ಸಾಲಿಯಾನ್, ಬಿ.ಎಂ.ಅಬ್ಬಾಸ್ ಆಲಿ, ಪಕ್ಷ ಪ್ರಮುಖರಾದ ಸಂಜೀವ ಪೂಜಾರಿ, ಸದಾಶಿವ ಬಂಗೇರ, ಜಗದೀಶ ಕೊಯ್ಲ ಮತ್ತಿತರರು ಉಪಸ್ಥಿತರಿದ್ದರು.

More articles

Latest article