Monday, April 8, 2024

ಶೀಘ್ರದಲ್ಲೇ ಬಿಡುಗಡೆ ಗೊಳ್ಳುವ ‘ಡಾ| ಶಿವರಾಮ ಭಂಡಾರಿ ಜೀವನ ಚರಿತ್ರೆ’ ಕೃತಿಗೆ ಶುಭಾರೈಕೆ ಯಾಚಿಸಿ ಡಾ| ವೀರೇಂದ್ರ ಹೆಗ್ಗಡೆ ಅವರಿಗೆ ಸಾಂಪ್ರದಾಯಿಕ ಮನವಿ

ಮುಂಬಯಿ,ಎ.೦೨: ಹೇರ್ ಸ್ಟೈಲೋ ಮೂಲಕ ಅಂತರಾಷ್ಟ್ರೀಯ ಹಿರಿಮೆಗೆ ಪಾತ್ರರಾಗಿರುವ ಮುಂಬಯಿನ ಖ್ಯಾತ ಕೇಶ ವಿನ್ಯಾಸಕಾರ, ಶಿವಾ’ಸ್ ಹೇರ್ ಡಿಝೈನರ್‍ಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಡಾ| ಶಿವರಾಮ ಕೃಷ್ಣ ಭಂಡಾರಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಭೂಷಣ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕಳೆದ ಶುಕ್ರವಾರ (ಮಾ.೨೯) ಭೇಟಿಗೈದು ಶೀಘ್ರದಲ್ಲೇ ಬಿಡುಗಡೆ ಗೊಳ್ಳುವ ತನ್ನ ಜೀವನ ಚರಿತ್ರೆ ಕೃತಿಗೆ ಶುಭಾರೈಕೆ ಯಾಚಿಸಿ ಸಾಂಪ್ರದಾಯಿಕವಾಗಿ ಬಿನ್ನಹ ಗೈದರು.

ಕಾರ್ಕಳ ಅತ್ತೂರು ಗ್ರಾಮದ ಹಳ್ಳಿ ಹುಡುಗನೋರ್ವ ತನ್ನ ಸಮುದಾಯದ ಕುಲಕಸಬು ಕೇಶ ಛೇದನವನ್ನೇ ಜೀವನ ಉದ್ಯಮವಾಗಿಸಿ ವೃತ್ತಿನಿಷ್ಠೆಯಿಂದಲೇ ಗೌರವ ಡಾಕ್ಟರೇಟ್‌ಗೆ ಭಾಜನರಾಗಿ ಸದ್ಯ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿರುವ ಶಿವರಾಮ ಭಂಡಾರಿ ಅವರ ಸಾಧನೆಗೆ ಡಾ| ಹೆಗ್ಗಡೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಪ್ರೊ| ಎಂ.ಪಿ ಶ್ರೀನಾಥ್ ಅರಸಿನಮಕ್ಕಿ, ಪತ್ರಕರ್ತ ಆರೀಫ್ ಕಲಕಟ್ಟಾ ಉಪಸ್ಥಿತರಿದ್ದರು.

More from the blog

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...