ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2018-19ನೇ ಸಾಲಿನ ದೀಪಪ್ರದಾನ ಕಾರ್ಯಕ್ರಮವು ಎ.12ನೇ ಶುಕ್ರವಾರದಂದು ವೇದವ್ಯಾಸ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ. ಎಸ್., ಎನ್. ಐ.ಟಿ.ಕೆ. ಸುರತ್ಕಲ್‌ನ ಆಡಳಿತ ನಿರ್ದೇಶಕ ಡಾ| ಕೆ. ಬಲವೀರ ರೆಡ್ಡಿ, ಚೆನ್ನೈನ ವಿಕ್ರಾಂತ್ ಕೆಮಿಕಲ್ ಕಾರ್ಪೋರೇಶನ್ ಪ್ರೈ. ಲಿ. ಆಡಳಿತ ನಿರ್ದೇಶಕ ಬಿ. ಜಿ. ಕಾರಂತ್, ಕರ್ನಾಟಕ ರಾಜ್ಯ ಸಾವಿತ್ರಿ ಭಾಯಿಪುಲೆ ಶಿಕ್ಷಕಿಯರ ಸಂಘ ಧಾರಾವಾಡದ ರಾಜ್ಯಾಧ್ಯಕ್ಷ ಲತಾ ಮುಳ್ಳೂರು ಆಗಮಿಸಲಿದ್ದಾರೆ. ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ರಾಷ್ಟ್ರ ಸೇವಿಕಾ ಸಮಿತಿ ಪ್ರಾಂತ ಕಾರ್‍ಯಕಾರಿಣಿ ಸದಸ್ಯೆ ಕಮಲಾ ಪ್ರಭಾಕರ ಭಟ್, ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಎನ್. ಗೌರವ ಉಪಸ್ಥಿತರಿರುತ್ತಾರೆ ಎಂದು ಪದವಿ ಪ್ರಾಚಾರ್ಯ ಶ್ರೀ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.


