Sunday, October 22, 2023

ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ

Must read

ವಿಟ್ಲ: ಮಕ್ಕಳ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಹಾಗೂ ಗುರು ಎಜುಕೇಶನ್ ಟ್ರಸ್ಟ್, ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ ಇವರ ಜಂಟಿ ಆಶ್ರಯದಲ್ಲಿ ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ ನಡೆಯಿತು.
ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿನಿ ಸನ್ಮಯಾ ಐ.ಕೆ ಇವರು ವಹಿಸಿದ್ದರು. ಈ ಕಾರ್‍ಯಕ್ರಮದಲ್ಲಿ ಮಕ್ಕಳ ಲೋಕ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ವಿಠಲ ಶೆಟ್ಟಿ ವಿಟ್ಲ, ಬರಹಗಾರ್ತಿ ಶಶಿಕಲಾ ವರ್ಕಾಡಿ ಹಾಗೂ ಉದಯೋನ್ಮುಖ ವಿದ್ಯಾರ್ಥಿ ಕವಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿನಿ ಕುಮಾರಿ ಧರಿತ್ರಿ ಸ್ವಾಗತಿಸಿ, ವಂದಿಸಿದರು. ಶಾಲಾ ವಿದ್ಯಾರ್ಥಿ ಪ್ರೀತಮ್ ಕೃಷ್ಣ ಕಾರ್‍ಯಕ್ರಮವನ್ನು ನಿರೂಪಿಸಿದರು.

More articles

Latest article