ಕೈಕಂಬ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವದ ಪ್ರಥಮ ಚೆಂಡಿನ ಉತ್ಸವ ಏ.೬ರಂದು ಶನಿವಾರ ಪ್ರಾರಂಭಗೊಂಡಿತು.

ದೇವಳದ ತಂತ್ರಿಗಳು ,ಅರ್ಚಕರು, ಆಡಳಿತಮಂಡಳಿಯ ಮೊಕ್ತೇಸರರು ಹಾಗೂ ದೇವಳದ ಪ್ರಮುಖರಾದವರು ದೇವಿಯಲ್ಲಿ ಪ್ರಾರ್ಥಿಸಿ ಅಮ್ಮುಂಜೆ ಮತ್ತು ಉಳಿಪಾಡಿಗುತ್ತಿನವರು. ಮೂಡಬಿದ್ರೆ ಚೌಟರ ಸೀಮೆಯ ಪದ್ಮನಾಭ ಚಮಗಾರ ತಯಾರಿಸಿಕೊಟ್ಟ ಸುಮಾರು ೧೮ ಕೇಜಿ ಭಾರದ ಬ್ರಹದ್ಖಾರದ ಚೆಂಡನ್ನು ಕೊಂಬು ಬ್ಯಾಂಡ್ ವಾಲಗದೊಂದಿಗೆ ಮೆರವಣಿಗೆಯಲ್ಲಿ ಪವಿತ್ರವಾದ ಚೆಂಡಿನಗದ್ದೆಗೆ ತರಲಾಗುವುದು.ಗದ್ದೆಯ ಉತ್ತರದಿಕ್ಕಿನ ಸುಲ್ತಾನ್ ಕಟ್ಟೆಯ ಬಳಿ ನಿಂತ ಅಮ್ಮುಂಜೆ ಹಾಗೂ ಉಳಿಪಾಡಿಗುತ್ತಿನವರನ್ನು ಸ್ವಾಗತಿಸಿ ಚೆಂಡಿನ ಮಧ್ಯ ಭಾಗಕ್ಕೆ ಕರೆದುಕೊಂಡು ಬಂದು ಮಟ್ಟಿ ಜೋಗಿಮನೆತನದವರು ಚೆಂಡಿನ ಆಟ ಸುರುಮಾಡಲು ಈರೀತಿ ಕರೆಯುತ್ತಾರೆ. “ಅಮ್ಮುಂಜೆ ಮಣೇಲ್ ಚೆಂಡ್ಗ್ ದುಂಬುಬಲೇ ಮಲ್ಲೂರು ಬೊಳ್ಳೂರು ಚೆಂಡ್ಗ್ ಓರ್ಮೆಡ್ ಜಪ್ಪುಲೆ “ಎಂದು ಹೇಳಿದಾಗ ಚೆಂಡುಹಿಡಿದಿದ್ದ ಗಾಣಿಗ ಮನೆತನದವರು ಚೆಂಡನ್ನು ಪರ್ದಖಂಡದ ಮನೆತನದವರಿಗೆ ಕೊಡುತ್ತಾರೆ.ಆಗ ಅವರು ಚೆಂಡನ್ನು ಹಾರಿಸಿ ಎಸೆಯುತ್ತಾರೆ. ಆಗ ಮಳಲಿ ಅಮ್ಮುಂಜೆ ಮಳಲಿ ಕಡೆಯ ಯುವಕರು , ಮಕ್ಕಳು ಚೆಂಡಾಟದಲ್ಲಿ ಭಾಗವಹಿಸುತ್ತರೆ. ಚೆಂಡು ಗದ್ದೆಯ ಬದಿಗೆ ಮುಟ್ಟಿಸಿ ಚೆಂಡು ಹಾರಿಸಿದವರಿಗೆ ಎತ್ತಿಕೊಂಡು ಬಂದು ಕೊಟ್ಟರೆ ಗೆಲುವು ಅವರಿಗಾಗುತ್ತದೆ. ಹೀಗೆ ದಿನಕ್ಕೆ ಮೂರು ಬಾರಿ ಚೆಂಡಾಟ ನಡೆಯುವುದು.ನಂತರ ಚೆಂಡನ್ನು ಶ್ರೀ ದೇವಳಯಕ್ಕೆ ತಂದು ಶ್ರೀ ದೇವಿಗೆ ಪೂಜೆ ನಡೆದು ದೇವಸ್ಥಾನಕ್ಕೆ ಒಂದು ಸುತ್ತು ಮೆರವಣಿಗೆಯಲ್ಲಿ ತಂದಲ್ಲಿಗೆ ಚೆಂಡಿನ ಉತ್ಸವ ಮುಕ್ತಾಯವಾಗುವುದು. ಇದಕ್ಕೆ ಜೀಟಿಗೆ ಸಲಾಂ ಎಂದು ಕರೆಯುತ್ತಾರೆ.ಈಗೇ ಪೊಳಲಿಯಲ್ಲಿ ಐದು ದಿನಗಳ ಚೆಂಡಿನ ಉತ್ಸವ ನಡೆಂಯುತ್ತದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here