


ಪುಣಚ : ಶ್ರೀಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಭಾನುವಾರ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು. ಧ್ವಜಾರೋಹಣದ ಬಳಿಕ ದೇವರ ನಿತ್ಯ ಬಲಿ, ಭೂತ ಬಲಿ ಉತ್ಸವ ನಡೆಯಿತು. ಅನ್ನಂಸಂತರ್ಪಣೆ, ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಅರಮನೆ ಅನುವಂಶಿಕ ಮೊಕ್ತೇಸರ ಪ್ರತಿನಿಧಿ ನಂದವರ್ಮ, ಆಡಳಿತ ಮಂಡಳಿ ಅಧ್ಯಕ್ಷರಾದ ಎಸ್. ಆರ್. ರಂಗಮೂರ್ತಿ, ಉಪಾಧ್ಯಕ್ಷರಾದ ಮಾರಪ್ಪ ಶೆಟ್ಟಿ, ಕಾರ್‍ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಕೋಶಾಧಿಕಾರಿ ಶಂಕರ್ ನಾರಾಯಣ ಭಟ್ ಮಲ್ಯ, ಆಡಳಿತ ಮಂಡಳಿ ಸದಸ್ಯರು, ಹಾಗೂ ಊರಪರವೂರ ಭಕ್ತರು ಭಾಗವಹಿಸಿದ್ದರು.
ಜಾತ್ರೋತ್ಸವದ ಅಂಗವಾಗಿ ಎ.8 ರಂದು ದೀಪ ಬಲಿ, ದರ್ಶನ ಬಲಿ, ಭೂತ ಬಲಿ ಉತ್ಸವ, ದೀಪ ಬಲಿ, ದರ್ಶನ ಬಲಿ, ಭೂತಬಲಿ, ಕೆರೆಕಟ್ಟೆ ಉತ್ಸವ, ಎ.10 ರಂದು ದೀಪ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಉತ್ಸವ ಬಲಿ, ದರ್ಶನ ಬಲಿ, ಬೆಡಿಕಟ್ಟೆ ಉತ್ಸವ, ಸಿಡಿಮದ್ದು ಪ್ರದರ್ಶನ, ಮೃಗಬೇಟೆ ಸವಾರಿ, ಭೂತಬಲಿ, ಎ.11 ರಂದು ಕವಾಟೋದ್ಘಾಟನೆ, ತುಲಾಭಾರ ಸೇವೆ, ರಾತ್ರಿ ಪಡುಪೇಟೆ ಸವಾರಿ, ಅವಭೃತ ಸ್ನಾನ, ಬಟ್ಟಲು ಕಾಣಿಕೆಯ ಬಳಿಕ ಧ್ವಜಾವರೋಹಣ ನಡೆಯಲಿದೆ. ಇದೇ ಸಂದರ್ಭದಲ್ಲಿ ಪ್ರತೀದಿನ ದೇಗುಲದ ಮುಂಭಾಗದ ಗದ್ದೆಯಲ್ಲಿರುವ ಬಯಲು ರಂಗಮಂದಿರದಲ್ಲಿ ನಾನಾ ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆಯಲಿವೆ.


