ಒಡಿಯೂರು ಶ್ರೀ :

ಒಡಿಯೂರುಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿಯವರ ಕರೋಪಾಡಿ ಗ್ರಾಮದ ಮಿತ್ತನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.

ಸಾಧ್ವಿ ಶ್ರೀಮಾತಾನಂದಮಯಿ : ಒಡಿಯೂರುಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀಮಾತಾನಂದಮಯಿ ಕರೋಪಾಡಿ ಗ್ರಾಮದ ಮಿತ್ತನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

ಮಾಣಿಲ ಶ್ರೀ: ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸಪರಮಹಂಸ ಸ್ವಾಮೀಜಿ ಮಾಣಿಲ ಗ್ರಾಮದ ಮುರುವ ಸರಕಾರಿ ಪ್ರೌಢಶಾಲೆಯ ೮೮ನೇ ಮತಗಟ್ಟೆಯಲ್ಲಿ ಮತ ಹಕ್ಕು ಚಲಾಯಿಸಿದರು.

ಕಣಿಯೂರು ಶ್ರೀ: ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿಯವರ ಕಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.

ಬಾಳೆಕೋಡಿ ಶ್ರೀ: ಕನ್ಯಾನ ಬಾಳೆಕೋಡಿ ಶ್ರೀಕಾಶೀಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರದ ಶ್ರೀ ಡಾ. ಶಶಿಕಾಂತಮಣಿ ಸ್ವಾಮೀಜಿ ಶಿರಂಕಲ್ಲು ಅನುದಾನಿತ ಶಾಲೆಯಲ್ಲಿ ಮತ ಚಲಾಯಿಸಿದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here