ಬಂಟ್ವಾಳ : ಗಿಡವೊಂದು ಹೇಗೆ ತನಗೆ ಸಿಕ್ಕಿದ ನೀರು, ಗೊಬ್ಬರಗಳನ್ನು ಹೀರಿ ಹೆಮ್ಮರವಾಗಿ ಬೆಳೆಯುತ್ತದೆಯೋ ಹಾಗೆಯೇ ವಿದ್ಯಾರ್ಥಿ ಜೀವನವಾಗಿದೆ. ಎಳೆಯ ವಯಸ್ಸಿನಲ್ಲಿಯೇ ಆತ ಪಡೆದ ಅನುಭವಗಳು ಆತನ ಪರಿಪಕ್ವತೆಗೆ ಕಾರಣವಾಗುತ್ತದೆ. ರಜೆಯ ಸಂದರ್ಭಗಳಲ್ಲಿ ನಡೆಯುವ ಶಿಬಿರಗಳಲ್ಲಿ ಪಾಲುಗೊಳ್ಳವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಹೇಳಿದರು

ಅವರು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನಲ್ಲಿ ಬಂಟ್ವಾಳ ತಾಲೂಕಿನ ವಿವಿಧ ಪೌಢ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಬೇಸಗೆ ಶಿಬಿರದ ಸಮರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತದ್ದರು. ಇಲ್ಲಿ ನೀವು ಪಡೆದ ಅನುಭವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವು ನಿಮ್ಮ ಮುಂದಿನ ವ್ಯಕ್ತಿತ್ವ ವಿಕಾಸಕ್ಕೆ ಪೂರಕ ಎಂದವರು ಹೇಳಿದರು
ಶಿಬಿರದ ಸಹ ಸಂಯೋಜಕ ಶಿವಣ್ಣ ಪ್ರಭು ಸ್ವಾಗತಿಸಿದರು. ಶಿಬಿರದ ಸಂಯೋಜಕಿ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಸಕೀನಾ ನಾಝರ್ ವಂದಿಸಿದರು. ಕನ್ನಡ ಉಪನ್ಯಾಸಕ ಚೇತನ್ ಮುಂಡಾಜೆ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕಿ ರೂಪಾ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಪ್ರೀಯಾ ಸಹಕರಿಸಿದರು.