Thursday, April 11, 2024

ಜೋಡುಮಾರ್ಗ ಜೇಸಿಯಿಂದ ಮತದಾರರ ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿ ಹಾಗೂ ಬಂಟ್ವಾಳ ತಾಲ್ಲೂಕು ಸ್ವೀಪ್ ಸಮಿತಿಯ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಬಳಿ ಮತದಾರರ ಜಾಗೃತಿ ಕಾರ್ಯಕ್ರಮ ಜರುಗಿತು.

 

ಬಂಟ್ವಾಳ ತಾಲ್ಲೂಕು ಪಂಚಾಯತ್ ಅಧಿಕಾರಿ ಹಾಗೂ ಸ್ವೀಪ್ ಸಮಿತಿಯ ಮುಖ್ಯಸ್ಥರು ಆಗಿರುವ ಶ್ರೀಯುತ ಬಾಲಕೃಷ್ಣ ನಾಕ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಮತದಾನದ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಅಧ್ಯಕ್ಷರಾದ ಹರ್ಷರಾಜ್ ಸಿ, ಕಾರ್ಯದರ್ಶಿ ರವೀಂದ್ರ ಕುಕ್ಕಾಜೆ, ಜೇಸಿರೆಟ್ ಅಧ್ಯಕ್ಷೆ ಅಮಿತಾ ಹರ್ಷರಾಜ್, ಉಪಾಧ್ಯಕ್ಷರುಗಳಾದ ಧೀರಜ್ ಹೆಚ್, ಜಯರಾಜ್ ಎಸ್. ಬಂಗೇರ, ಗಾಯತ್ರಿ ಲೋಕೇಶ್, ಸುಧಾಕರ್ ವೈ, ಜೇಜೇಸಿ ಅಧ್ಯಕ್ಷ ರೋನಿತ್, ವರುಣ್ ರಾಜ್, ಆದಿತ್ಯ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಜೇಸಿ, ಜೇಜೇಸಿ ಸದಸ್ಯರು ಮತದಾನದ ಮಹತ್ವದ ಅಂಶಗಳನ್ನೊಳಗೊಂಡ ಕರಪತ್ರವನ್ನು ಬಸ್ ನಿಲ್ದಾಣದಲ್ಲಿ ನೆರೆದಿರುವ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲಕರಿಗೆ ವಿತರಿಸಿ ಮತದಾನದ ಮಹತ್ವವನ್ನು ತಿಳಿಸಿ ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಪ್ರೇರೇಪಿಸಲಾಯಿತು.

 

More from the blog

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...