Monday, October 23, 2023

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

Must read

*ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ಶಿಕ್ಷಣ ಇಲಾಖೆ ಸ್ಕೂಲ್ ಬ್ಯಾಗ್‍ನ ತೂಕ ಇಳಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ. ಕೆಜಿ ಗಟ್ಟಲೆ ಸ್ಕೂಲ್ ಬ್ಯಾಗ್ ಹೊರುವುದರಿಂದ ಶಾಲಾ ಮಕ್ಕಳ ದೈಹಿಕ ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

1-10 ನೇ ತರಗತಿವರಗಿನ ಮಕ್ಕಳ ಬ್ಯಾಗ್ ತೂಕಕ್ಕೆ ಶಿಕ್ಷಣ ಇಲಾಖೆ ಹೊಸ ಆದೇಶ ಹೊರಡಿಸಿದೆ. ಬ್ಯಾಗ್ ತೂಕವು ಮಗುವಿನ ದೇಹದ ಸರಾಸರಿ ಶೇ.10 ರಷ್ಟು ಮೀರುವಂತೆ ಇಲ್ಲ. 1-2 ತರಗತಿ ಮಕ್ಕಳಿಗೆ ಇನ್ನು ಮುಂದೆ ಹೋಂ ವರ್ಕ್ ಕೊಡುವಂತಿಲ್ಲ ಎಂದು ಹೇಳಿದೆ. ಪ್ರತಿ ತಿಂಗಳ ಮೂರನೇ ಶನಿವಾರ ಬ್ಯಾಗ್ ರಹಿತ ದಿನ ಆಚರಣೆ ಕಡ್ಡಾಯವಾಗಿ ಆಗಬೇಕು. ಮಕ್ಕಳು ನೀರಿನ ಬಾಟಲ್ ತರುವುದು ತಪ್ಪಿಸಲು ಶಾಲೆಯಲ್ಲೇ ನೀರಿನ ವ್ಯವಸ್ಥೆ ಮಾಡಬೇಕು. ಈ ಎಲ್ಲಾ ಯೋಜನೆಗಳು ರಾಜ್ಯದ ಎಲ್ಲಾ ಶಾಲೆಗಳಲ್ಲೂ ಈ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗಬೇಕು ಎಂದು ಆದೇಶ ನೀಡಿದೆ.

*ಸ್ಕೂಲ್ ಬ್ಯಾಗ್ ರೂಲ್ಸ್*
1. ಹೊಸ ಆದೇಶದ ಅನ್ವಯ ಮಕ್ಕಳ ಬ್ಯಾಗ್ ತೂಕವು ಮಗುವಿನ ದೇಹದ ಸರಾಸರಿ 10% ಮೀರುವಂತಿಲ್ಲ.
2. 1-2 ತರಗತಿಗೆ ಇನ್ನುಂದೆ ಹೋಂ ವರ್ಕ್ ಕೊಡುವಂತಿಲ್ಲ.
3. ಪ್ರತಿ ತಿಂಗಳ ಮೂರನೇ ಶನಿವಾರ ಬ್ಯಾಗ್ ರಹಿತ ದಿನ ಆಚರಣೆ ಕಡ್ಡಾಯ.
4. ಮಕ್ಕಳು ನೀರಿನ ಬಾಟಲ್ ತರುವುದು ತಪ್ಪಿಸಲು ಶಾಲೆಯಲ್ಲೆ ನೀರಿನ ವ್ಯವಸ್ಥೆ ಮಾಡೋದು ಕಡ್ಡಾಯ.
5. 100 ಹಾಳೆಗಳು ಮೀರದ ಪುಸ್ತಕವನ್ನೇ ಮಕ್ಕಳಿಗೆ ನೀಡಬೇಕು.
6. ಬ್ಯಾಗ್ ತೂಕದ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವ ಕೆಲಸ ಶಾಲೆಗಳು ಮಾಡಬೇಕು.
7. ಮುಂಚಿತವಾಗಿಯೇ ಮಕ್ಕಳಿಗೆ ಆಯಾ ದಿನದ ವೇಳಾಪಟ್ಟಿಗೆ ಅನುಗುಣವಾಗಿ ಪುಸ್ತಕಗಳನ್ನು ತರಲು ಸೂಚನೆ ನೀಡುವುದು.
8. ಮಕ್ಕಳಿಗೆ ಅಗತ್ಯವಾದ ಕಲಿಕಾ ಸಾಮಗ್ರಿಗಳನ್ನು ಆದಷ್ಟು ಶಾಲೆಗಳಲ್ಲಿ ಸಂಗ್ರಹ ಮಾಡುವ ವ್ಯವಸ್ಥೆ ಶಾಲೆ ಮಾಡಬೇಕು.

*ಹೊಸ ಆದೇಶದ ಅನ್ವಯ ಮಕ್ಕಳ ಶಾಲಾ ಬ್ಯಾಗ್ ತೂಕ*
1. 2ನೇ ತರಗತಿ – 1.5 ರಿಂದ 2 ಕೆಜಿ.
2. 3-5ನೇ ತರಗತಿ – 2 ರಿಂದ 3 ಕೆಜಿ
3. 6-8ನೇ ತರಗತಿ – 3 ರಿಂದ 4 ಕೆಜಿ.
4. 9-10ನೇ ತರಗತಿ – 4 ರಿಂದ 5 ಕೆಜಿ

*ಶಾಲಾ ಬ್ಯಾಗ್ ರಹಿತ ದಿನದ ಚಟುವಟಿಕೆಗಳು*
1. ಕ್ಷೇತ್ರ ಸಂಚಾರ
2. ವಾರ್ತಾಪತ್ರಿಕೆಗಳ ಚಟುವಟಿಕೆಗಳು
3. ಗಣಿತ ವಿನೋದ, ಅಬ್ಯಾಕಸ್
4. ವಿಜ್ಞಾನ ಪ್ರಯೋಗ ಮತ್ತು ಪ್ರದರ್ಶನಗಳು
5. ಸಾಮಾನ್ಯ ಜ್ಞಾನ ಶೈಕ್ಷಣಿಕ ಸಂಘದ ಚಟುವಟಿಕೆಗಳು
6. ಚಿತ್ರಕಲೆ, ಚಿತ್ರಗಳಿಗೆ ಬಣ್ಣ ತುಂಬುವುದು, ಕರಕುಶಲತೆ
7. ಸಾಮಾಜಿಕ ಉಪಯೋಗಿತ ಉತ್ಪಾದನಾ ಕಾರ್ಯ
8. ಭಕ್ತಿಗೀತೆಗಳು ಮತ್ತು ದೇಶಭಕ್ತಿಗೀತೆಗಳ ಚಟುವಟಿಕೆ (ಕನ್ನಡ, ಹಿಂದಿ, ಇಂಗ್ಲೀಷ್)
9. ಚಿತ್ರ ಓದುವಿಕೆ ಮತ್ತು ನಕ್ಷೆ ಓದುವಿಕೆ
10. ಒಳಾಂಗಣ ಕ್ರೀಡೆಗಳು (ಹಾವು ಮತ್ತು ಏಣಿ, ಕೇರಂ ಬೋರ್ಡ್ ಇತ್ಯಾದಿ)
11. ಹೊರಾಂಗಣ ಕ್ರೀಡೆಗಳು
12. ದೃಕ್ ಶ್ರವಣ ಮಾಧ್ಯಮಗಳ ಚಟುವಟಿಕೆಗಳು/ ಶ್ಲೋಕಗಳನ್ನು ಪಠಿಸುವುದು
13. ನೃತ್ಯ/ ಚರ್ಚಾಸ್ಪರ್ಧೆ/ ನಾಟಕ/ ಏಕಪಾತ್ರಾಭಿನಾಯ/ ಆಶುಭಾಷಣ ಸ್ಪರ್ಧೆಗಳು/ ಧ್ಯಾನ/ ಯೋಗಗಳ ಚಟುವಟಿಕೆ
14. ಶಾಲಾ ಪರಿಸರಕ್ಕೆ ಅನುಗುಣವಾದ ಶೈಕ್ಷಣಿಕ ಚಟುವಟಿಕೆಗಳು.

More articles

Latest article