ಬಂಟ್ವಾಳ: ಖ್ಯಾತ ಯಕ್ಷಗಾನ ಕಲಾವಿದ  ಆಶೋಕ್ ಶೆಟ್ಟಿ ಸರಪಾಡಿ ಅವರು ಅರ್ಯಬಟ ಅಂತರಾಷ್ಟ್ರೀಯ 2018 ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೇ.30 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನವಾಗಲಿದೆ.

ಸಾಹಿತ್ಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸರಪಾಡಿ ಆಶೋಕ ಶೆಟ್ಟಿ ಅವರು ಯಕ್ಷಗಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಈ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿ ಪುರಸ್ಕೃತರಾಗಿರುವ ಆಶೋಕ ಶೆಟ್ಟಿ ಅವರ ಪ್ರಶಸ್ತಿಯ ಸಾಲಿಗೆ ಇದೀಗ ಆರ್ಯಬಟ ಪ್ರಶಸ್ತಿಯು ಸೇರಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here