Wednesday, October 18, 2023

ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Must read

ಬಂಟ್ವಾಳ: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ  2019-20 ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಒಟ್ಟಾರೆ ಶೇಕಡಾ 35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಇಲಾಖೆಯ  www.dte.kar.nic.in  ವೆಬ್‍ಸೈಟ್‍ನ ಮೂಲಕ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡುಡಿಪ್ಲೋಮಾ ಅರ್ಜಿ ನೋಂದಣಿ ಶುಲ್ಕವನ್ನು ನಗದು ರೂಪದಲ್ಲಿ ಮೇ:18 ರ ಸಂಜೆ 5.30 ಗಂಟೆಯೊಳಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿಮಾಡಿ   ಬಂಟ್ವಾಳ ಸರ್ಕಾರಿ ಪಾಲಿಟೆಕ್ನಿಕ್,ಗೆ ಅನ್‍ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಂಶುಪಾಲರನ್ನು ಮುಖತಾ ಅಥವಾ ಮೊಬೈಲ್ ಸಂಖ್ಯೆ : 8762328660 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

More articles

Latest article