Wednesday, October 18, 2023

ಕಕ್ಯಪದವು ಶ್ರೀ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಬ್ರಹ್ಮ ಕಲಶೋತ್ಸವಕ್ಕೆ ಚಾಲನೆ

Must read

ಬಂಟ್ವಾಳ: ನಾವು ಮಾಡುವ ಕರ್ಮಗಳಿಗೆ ದೇವರು ಸಾಕ್ಷಿ ಮಾತ್ರ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು. ಅತ್ಯಂತ ಸುಂದರವಾದ ಗರಡಿ ನಿರ್ಮಾಣಗೊಂಡಿದೆ.
ನಮ್ಮೊಳಹೆ ಪಾಂಡವತು ಹಾಗೂ ಕೌರವರ ವ್ಯಕ್ತಿತ್ವ ಇದೆ.‌ಅದನ್ನು ಗುರುತಿಸುವ ಶಕ್ತಿ ನಮಗೆ ಮಾತ್ರ ಇರುತ್ತದೆ. ಕ್ಷಿಪ್ರ ಅನುಗ್ರಹವನ್ನು ದೈವಗಳು ನೀಡುತ್ತವೆ.

ಅವರು ಬ್ರಹ್ಮಕಲಶ ಸಂಭ್ರಮದಲ್ಲಿರುವ ಕಕ್ಯಪದವಿನ ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದಲ್ಲಿ ಸರ್ವಕಾರ್ಯಕ್ರಮಗಳನ್ನು ಉದ್ಘಾಟಿಸಿ ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಧರ್ಮಾಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾಣಿಲ ಶ್ರೀ ಧಾಮದ ಶ್ರಿ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ , ಮಾಜಿ ಸಚಿವ ಬಿ. ರಮಾನಾಥ ರೈ ಪ್ರಾಸ್ತವಿಕವಾಗಿ ಮಾತನಾಡಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನಯ ಶ್ರೀ. ಕ್ಷೇ.ಗ್ರಾ. ಯೋಜನೆ ವಗ್ಗ ವಲಯದ ವತಿಯಿಂದ ಸನ್ಮಾನಿಸಲಾಯಿತು. ವಾಸ್ತುಶಿಲ್ಪಿ ಪ್ರಮಲ್ ಕುಮಾರ್ ಅವರನ್ನು ಗರಡಿ ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.
ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಮೋಕ್ತೇಸರ ಕುಟುಂಬಸ್ಥರಾದ ರಾಜವೀರ್ ಜೈನ್, ಸಂಚಾಲಕರಾದ ಚಿತ್ತರಂಜನ್ ಕಂಕನಾಡಿ, ರೋಹಿನಾಥ ಪಾದೆ, ಕಾರ್ಯಧ್ಯಕ್ಷ ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ವಾಸ್ತು ಶಿಲ್ಪಿ ಪ್ರಮಲ್ ಕುಮಾರ್, ರತ್ನ ಕುಮಾರ್ ಆರಿಗ ನಾಯಿಲ, ಕಕ್ಯಬೀಡು ದುರ್ಗಾಪರಮೇಶ್ವರೀ ದೇವಸ್ಥಾನದ ಅಧ್ಯಕ್ಷ ಜಾರಪ್ಪ ಶೆಟ್ಟಿ ಖಂಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.

More articles

Latest article