Wednesday, April 10, 2024

ಕಲ್ಲಡ್ಕ: ರೈತರ ಸೇವಾ ಸಹಕಾರ ಸಂಘ ನಿ, ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ ಪ್ರತಿನಿಧಿಗಳು ಆಯ್ಕೆ

ಕಲ್ಲಡ್ಕ: ರೈತರ ಸೇವಾ ಸಹಕಾರ ಸಂಘ ನಿ, ಕಲ್ಲಡ್ಕ ಇದರ ಮುಂದಿನ 5 ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿಯ 13 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ 13 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.
ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪ್ರೌಢ ಶಾಲೆಯಲ್ಲಿ ನಡೆದ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಕೆ.ಪದ್ಮನಾಭ ಕೊಟ್ಟಾರಿ, ಬಿ.ಸುಧಾಕರ ರೈ, ಗಿರಿಯಪ್ಪ ಗೌಡ, ಪೂವಪ್ಪ ಗೌಡ, ಸುರೇಶ್ ಶೆಟ್ಟಿ, ಮಹಾಬಲ ಸಾಲ್ಯಾನ್ ಆಯ್ಕೆಯಾಗಿರುತ್ತಾರೆ. ಹಿಂದುಳಿದ ಪ್ರವರ್ಗ ’ಎ’ ಸ್ಥಾನದಿಂದ ಚಂದ್ರಶೇಖರ ಟೈಲರ್ ಮತ್ತು ಲೋಕಾನಂದ, ಮಹಿಳಾ ಮೀಸಲು ಕ್ಷೇತ್ರದಿಂದ ಅರುಣ ಭಟ್ ಮತ್ತು  ವಿಜಯ ರವರು ಆಯ್ಕೆಯಾಗಿರುತ್ತಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ವೆಂಕಟ್ರಾಯ ಪ್ರಭು ರವರು ಚುನಾಯಿತರಾಗಿರುತ್ತಾರೆ. ಪರಿಶಿಷ್ಟ ಜಾತಿ ಕ್ಷೇತ್ರದಿಂದ ಎಂ.ಆರ್.ನೋಣಯ್ಯ ಮತ್ತು ಪರಿಶಿಷ್ಟ ಪಂಗಡ ಸ್ಥಾನದಿಂದ ಕೊರಗಪ್ಪ ನಾಯ್ಕ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಬಿ.ನಾಗೇಂದ್ರರವರು ಸುಸೂತ್ರವಾಗಿ ಚುನಾವಣೆಯನ್ನು ನಡೆಸಿಕೊಟ್ಟಿರುತ್ತಾರೆ.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...