ವಿಟ್ಲ: ವಿಟ್ಲದ ವಿಠಲ ವಿದ್ಯಾ ಸಂಘದ ವಿಠಲ ಪದವಿ ಪೂರ್ವ ಕಾಲೇಜು ವಿಭಾಗದ ಪ್ರಥಮ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್‍ಯಕ್ರಮವನ್ನು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಕಾಲೇಜಿನ ಪ್ರಾರಂಭೋತ್ಸವದಂದು ನಡೆಸಲಾಯಿತು.
ಈ ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಎಲ್.ಎನ್ ಕೂಡೂರು ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರುಗಳಾದ ಪದ್ಮಯ್ಯ ಗೌಡ ಮತ್ತು ಬಾಬು ಕೊಪ್ಪಳ ಹಾಗೂ ಉಪನ್ಯಾಸಕಿ ಚಂದ್ರಕಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಿನ್ಸಿಪಾಲ್ ಆದರ್ಶ ಚೊಕ್ಕಾಡಿ ಪ್ರಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕಿ ಸಂಧ್ಯಾ ವಂದಿಸಿದರು. ಉಪನ್ಯಾಸಕಿ ರಕ್ಷಿತಾ ಕಾರ್‍ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಚೇತನಾ ಸಹಕರಿಸಿದರು.


