Thursday, October 26, 2023

ಪತ್ರಕರ್ತರ ಜಿಲ್ಲಾ ಸಮ್ಮೇಳನ : ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸಮಾಲೋಚನಾ ಸಭೆ

Must read

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 1ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ವಿತರಿಸಲಾಯಿತಲ್ಲದೆ ಸಮಾಲೋಚನಾ ಸಭೆಯು ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಆಮಂತ್ರಣ ಪತ್ರಿಕೆಯನ್ನು ಹಿರಿಯ ಪತ್ರಕರ್ತ ವೆಂಕಟೇಶ್ ಬಂಟ್ವಾಳ್ ಅವರಿಗೆ ಸಾಂಕೇತಿಕವಾಗಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭ ಅವರು, ಸಮ್ಮೇಳನದ ವೈಶಿಷ್ಟ್ಯಗಳನ್ನು ಹಾಗೂ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರ ನೀಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರೂ,ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ ಆಗಿರುವ ಹರೀಶ ಮಾಂಬಾಡಿ, ತಾಲೂಕು ಕಾರ್ಯದರ್ಶಿ ಮಹಮ್ಮದ್ ಆಲಿ ವಿಟ್ಲ, ಉಪಾಧ್ಯಕ್ಷ ವಿಷ್ಣುಗುಪ್ತ ಪುಣಚ, ಜತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ತಲಪಾಡಿ, ಕೋಶಾಧಿಕಾರಿ ಯಾದವ ಕುಲಾಲ್, ಸದಸ್ಯರಾದ ವೆಂಕಟೇಶ್ ಬಂಟ್ವಾಳ, ಉದಯಶಂಕರ ನೀರ್ಪಾಜೆ, ರತ್ನದೇವ್ ಪುಂಜಾಲಕಟ್ಟೆ, ವಾಮನ ಪೂಜಾರಿ, ಸಂದೀಪ್ ಸಾಲ್ಯಾನ್, ಚಂದ್ರಶೇಖರ ಕಲ್ಮಲೆ ಈ ಸಂದರ್ಭ ಉಪಸ್ಥಿತರಿದ್ದರು.

More articles

Latest article