Wednesday, April 10, 2024

ಸರಕಾರಿ ಶಾಲೆ ಉಳಿವಿಗೆ ಎಲ್ಲರ ಸಹಕಾರ ಅಗತ್ಯ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಸರಕಾರಿ ಶಾಲೆಯ ಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಅಲಂಕರಿಸಿದ್ದಾರೆ, ಇಂತಹ ಶಾಲೆಯ ಕೊರತೆ ಗಳನ್ನು ನೀಗಿಸಲು ಸರಕಾರದ ಜೊತೆ ಸಂಘ ಸಂಸ್ಥೆಗಳು ಕೈ ಜೋಡಿಸಿದಾಗ ಪ್ರತಿ ಸರಕಾರಿ ಶಾಲೆಗಳು ಉಳಿದು ಬೆಳೆಯುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಗೋಳ್ತಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ವತಿಯಿಂದ ಶಾಲಾ ಮಕ್ಕಳಿಗೆ ಕಂಪ್ಯೂಟರ್, ಪ್ರಿಂಟಿಂಗ್ ಮೆಷಿನ್, ಶಾಲಾ ಬ್ಯಾಗ್ ಹೀಗೆ ವಿವಿಧ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ವಿತರಣಾ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೊಸ ಶಾಲೆಯ ನಿರ್ಮಾಣದ ಬದಲು ಹಳೆಯ ಸರಕಾರಿ ಶಾಲೆಗಳ ಅಭಿವೃದ್ಧಿ ಗಾಗಿ ಪಣತೊಡುವಂತೆ ಯುವಕರಿಗೆ ಕರೆ ನೀಡಿದರು.
ಸಮಿತಿ ಅಥವಾ ದಾನಿಗಳ ಸಹಾಯದಿಂದ ಶಾಲೆಯ ದತ್ತು ಪಡೆದು ಶಿಕ್ಷಣ ನೀಡುವ ಮಹತ್ತರ ಕಾರ್ಯಕ್ಕೆ ಯುವ ಜನತೆ ಮನಸ್ಸು ಮಾಡಬೇಕಾಗಿದೆ ಎಂದು ಅವರು ಹೇಳಿದರು.


ಮಕ್ಕಳ ಉತ್ತಮ ಭವಿಷ್ಯ ಕ್ಕಾಗಿ ಸರಕಾರ ದ ಸವಲತ್ತುಗಳನ್ನು ನೀಡಲು ನಾನು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಅಂಗನವಾಡಿಗಳನ್ನು ಸರಕಾರಿ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲು ಚಿಂತನೆ ನಡೆಸಲಾಗುತ್ತಿದ್ದು ಸರಕಾರದ ಮಟ್ಟದಲ್ಲಿ ಒತ್ತಡ ಹಾಕುತ್ತಿದ್ದೇನೆ  ಎಂದು ಅವರು ಹೇಳಿದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಮಾತನಾಡಿ ಸರಕಾರದ ಸವಲತ್ತುಗಳನ್ನು ಮಾತ್ರ ಉಪಯೋಗಿಸಿಕೊಂಡು ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ, ಜೊತೆಗೆ ಶಾಲಾ  ಎಸ್.ಡಿ.ಎಂ.ಸಿ.  ಸಹಾಯದ ಮೂಲಕ ಅಭಿವೃದ್ಧಿ ಪಡಿಸುವ ಮನಸ್ಸು ಮಾಡಿದರೆ ಮಾತ್ರ ಸರಕಾರಿ ಶಾಲೆಗಳನ್ನು ಬಲಪಡಿಸಬಹುದು ಎಂದು ಅವರು ಹೇಳಿದರು.
ಸರಕಾರಿ ಶಾಲೆ ನಮ್ಮ ಶಾಲೆ ಎಂಬ ಮನಸ್ಸು ಮಾಡಬೇಕಾಗಿದೆ ಎಂದು ಅವರು ಹೇಳಿದರು. ‌
ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಕಾರ್ಯಧ್ಯಕ್ಷ  ಚಂದ್ರಶೇಖರ್ ಟೈಲರ್  ಎಸ್.ಡಿ.ಎಂ.ಸಿ.ಕಾರ್ಯಧ್ಯಕ್ಷ  ಚಂದ್ರಶೇಖರ್ ಟೈಲರ್
ಕಲ್ಲಡ್ಕ ರೈತರ ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಸುಧಾಕರ ರೈ, ಶಾಲಾ ಸ್ಥಳದಾನಿ ಮಹಮ್ಮದ್ ಯೂಸುಫ್ ಹಾಜಿ ಹಜಾಜ್ ,  ತಾ.ಪಂ.ಸದಸ್ಯ ಮಹಾಬಲ ಆಳ್ವ, ಗ್ರಾ.ಪಂ.ಸದಸ್ಯ ಮೋನಪ್ಪ ದೇವಸ್ಯ, ಗ್ರಾ.ಪಂ.ಸದಸ್ಯೆ ಜಯಶ್ರೀ ಹಾಗೂ ಎಸ್.ಡಿ.ಎಂ.ಸಿ.ಸದಸ್ಯರು ಗಳು ಉಪಸ್ಥಿತರಿದ್ದರು.

ಶಿಕ್ಷಕ ನಾರಾಯಣ ಅವರು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳನ್ನು ಉಚಿತವಾಗಿ ನೀಡಿದ ದಾನಿಗಳನ್ನು ಶಾಲಾಭಿವೃದ್ದಿ ವತಿಯಿಂದ ಶಾಸಕರು ಶಾಲು ಹೊದಿಸಿ ಗೌರವಿಸಿದರು.

ಮುಖ್ಯೋಪಾಧ್ಯಾಯಿನಿ ಸುಜಾತ ಎಂ.ಸ್ವಾಗತಿಸಿ.  ಶಿಕ್ಷಕ ಶಂಕರ್ ಪಾವಸ್ಕರ್ ವಂದಿಸಿದರು.ಶಿಕ್ಷಕಿ ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...