Thursday, April 11, 2024

ಕುಸಿಯುವ ಭೀತಿಯಲ್ಲಿರುವ ಪಾಣೆಮಂಗಳೂರು ಹಾಸ್ಟೆಲ್ ಗೆ ಶಾಸಕ ರಾಜೇಶ್ ನಾಯ್ಕ್ ಬೇಟಿ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಶಿಥಿಲಾವಸ್ಥೆಗೆ ತಲುಪಿ ಕುಸಿಯುವ ಭೀತಿಯಲ್ಲಿರುವ ದೇವರಾಜು ಅರಸು ಬಾಲಕರ ಹಾಸ್ಟೆಲ್ ಕಟ್ಟಡಕ್ಕೆ ಮಂಗಳವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿದ್ದು, ಬಂಗ್ಲೆಗುಡ್ಡೆಯ ಪುರಸಭಾ ಕಟ್ಟಡದಲ್ಲಿ ಬಾಡಿಗೆ ನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ ಬಾಲಕರ ಹಾಸ್ಟೆಲ್ ಕಟ್ಟಡ ಕಳೆದ ಕೆಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿಯುವ ಭೀತಿ ಎದುರಿಸುತ್ತಿದೆ. ಇತ್ತೀಚೆಗೆ ತೀವ್ರ ನಾದುರಸ್ಥಿಗೆ ತಲುಪಿದ ಕಟ್ಟಡದಲ್ಲಿ ವಿದ್ಯಾರ್ಥಿಗಳ ವಾಸ ಅಪಾಯಕಾರಿ ಎಂದರಿತು ಗುರುವಾರವಷ್ಟೆ ಇಲ್ಲಿನ ವಿದ್ಯಾರ್ಥಿಗಳನ್ನು ಮೊಗರ್ನಾಡುವಿನ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು.
ಈ ಬಗ್ಗೆ ಸ್ಥಳೀಯರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಹಾಸ್ಟೆಲ್‌ಗೆ ಭೇಟಿ ನೀಡಿ, ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಗೂ ಹಾಸ್ಟೆಲ್ ವಾರ್ಡನ್‌ಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಣೆಮಂಗಳೂರಿನ ಬಂಗ್ಲೆಗುಡ್ಡೆಯ ಪುರಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ವಸತಿ ನಿಲಯ 120 ವರ್ಷಕ್ಕೂ ಹಳೆದಾಗಿದೆ. ಕಳೆದ ಕೆಲವು ವರ್ಷಗಳಿಂದ ಶಿಥಿಲಾವಸ್ಥೆಗೆ ತಲುಪಿದ್ದ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಗಳಾಗಿತ್ತು. ಈ ಕಟ್ಟಡ ಬಂಟ್ವಾಳ ಪುರಸಭೆಯ ಅಧೀನದಲ್ಲಿ ಕಾರ್ಯಾಚರಿಸುತ್ತಿದ್ದು, ಈ ಕಟ್ಟಡವು ಮತ್ತಷ್ಟು ಶಿಥಿಲಗೊಂಡಿದೆ ಎಂದು ಹೇಳಿದರು.
ಹಳೆ ಹಾಸ್ಟೆಲ್ ಪಕ್ಕದಲ್ಲಿಯೇ ಇಲ್ಲಿನ ಬಾಲಕರಿಗಾಗಿ ನಿರ್ಮಿಸಿದ ಹೊಸ ಕಟ್ಟಡದಲ್ಲಿ ಮೆಟ್ರಿಕ್ ಪೂರ್ವ ಬಾಲಕಿಯರಿಗೆ ವಸತಿ ವ್ಯವಸ್ಥೆ ಮಾಡಿದ್ದು, ಇದರಿಂದ ಇಲ್ಲಿರುವ 35 ಬಾಲಕರನ್ನು ಹಳೆ ಕಟ್ಟಡದಲ್ಲಿಯೇ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಹಳೆ ಕಟ್ಟಡವು ಮತ್ತಷ್ಟು ಶಿಥಿಲಗೊಂಡಿದ್ದು, ಘಟನೆಯ ಬಳಿಕ ಮಕ್ಕಳಿಗೆ ಇಲಾಖೆಯು ಈಗಾಗಲೇ ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸುವ ಮೂಲಕ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸ ಕಟ್ಟಡ ನಿರ್ಮಿಸಲು ಸರಕಾರಕ್ಕೆ ಸಲ್ಲಿಕೆಯಾಗಿರುವ ಹಾಗೂ ಬಾಲಕಿಯರಿಗಾಗಿ ಕಾಮಾಜೆಯಲ್ಲಿ ನಿಗದಿಯಾಗಿರುವ ಸ್ಥಳದಪ್ರಸ್ತಾವದ ಬಗ್ಗೆ ದೂರವಾಣಿ ಕರೆ ಮೂಲಕ ಆಯುಕ್ತರೊಂದಿಗೆ ಚರ್ಚಿಸಿದ ಶಾಸಕರು, ಇನ್ನೆರಡು ದಿನಗಳಲ್ಲಿ ಈ ಪ್ರಸ್ತಾವಕ್ಕೆ ಆಯುಕ್ತರಿಂದ ಮಂಜೂರಾತಿ ಪಡೆದುಕೊಳ್ಳುಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಅದೇ ರೀತಿ ಇಲ್ಲಿನ ತ್ಯಾಜ್ಯ ನೀರು ಪಕ್ಕದ ಮನೆಗಳ ಮುಂಭಾಗದಲ್ಲಿ ಹರಿದು ಉಂಟಾಗುವ ಸಮಸ್ಯೆಯ ಬಗ್ಗೆ ಸ್ಥಳೀಯರು ಶಾಸಕ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಶಾಸಕರು ಆವರಣ ಗೋಡೆ ನಿರ್ಮಾಣ ಹಾಗೂ ತ್ಯಾಜ್ಯ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಭರವಸೆ ನೀಡಿದರು.

ಹೊಸ ಹಾಸ್ಟೆಲ್ ಪರಿಶೀಲನೆ:
ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು,
ಇಲ್ಲಿನ ವ್ಯವಸ್ಥೆ ಹಾಗೂ ಶುಚಿತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಸ್ಟೆಲ್‌ಗೆ ಪೂರೈಕೆಯಾಗುತ್ತಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಇಲಾಖೆ ಬಂಟ್ವಾಳದ ವಿಸ್ತರಣಾಧಿಕಾರಿ ಎಸ್.ಶಿವಣ್ಣ, ಹಾಸ್ಟೆಲ್ ವಾರ್ಡನ್‌ಗಳಾದ ಭವಾನಿ, ಶಶಿಕಲಾ ಶೆಟ್ಟಿ, ಗಣೇಶ್ ರೈ ಮಾಣಿ, ಲಕ್ಷಣ್, ಕೃಷ್ಣಪ್ಪ ಹಾಜರಿದ್ದರು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...