Wednesday, April 10, 2024

ಜನತಾ ಪದವಿಪೂರ್ವ ಕಾಲೇಜು: ಸ್ವಾಗತ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ

ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ದ್ವಿತೀಯ
ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾರಂಭವು ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಕನ್ನಡ ಸಂಘ ವಿಟ್ಲ ಇದರ ಅಧ್ಯಕ್ಷ ಹಾಗೂ ವಿಟ್ಲದ ವಿಠಲ ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.
ಅನಂತಕೃಷ್ಣ ಹೆಬ್ಬಾರ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೆಚ್ಚಿನ ಅಂಕ ಗಳಿಕೆಯು ಅನಿವಾರ್ಯ. ಹಾಗೆಯೇ ಜೀವನದಲ್ಲಿ
ಯಶಸ್ವಿಯಾಗಬೇಕಾದರೆ ವಿವೇಕ ಹಾಗೂ ಆತ್ಮಗೌರವವನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಯಿತ್ತರು.
ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ರಮೇಶ ಎಂ.
ಬಾಯಾರ್, ಪ್ರಾಂಶುಪಾಲರಾದ ಡಿ. ಶ್ರೀನಿವಾಸ್ ಶುಭ ಹಾರೈಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ
ತೇರ್ಗಡೆಯಾದ 22 ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ಸಂಕೇತ್ ಬಾಳಿಗ, ಕಾವ್ಯಸಾಗರ್, ಸುರಕ್ಷಾ ಮತ್ತು ಪೋಷಕರು ಅನಿಸಿಕೆ ಹಂಚಿಕೊಂಡರು.
ಅರ್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಅವರು ಪ್ರಸ್ತಾವಿಸಿ, ಆಂಗ್ಲಭಾಷಾ ಉಪನ್ಯಾಸಕಿ ಜಯಶ್ರೀ ಕೆ. ಆರ್. ಪರಿಚಯಿಸಿದರು. ಭಾಗ್ಯಶ್ರೀ
ಸ್ವಾಗತಿಸಿ, ಕೃಷ್ಣ ಶರ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...