Tuesday, October 31, 2023

ಕೈಕಂಬ ಪ್ರಕರಣ : ಐವರ ಬಂಧನ

Must read

ಬಂಟ್ವಾಳ: ಬಿ.ಸಿ.ರೋಡ್ ಕೈಕಂಬದಲ್ಲಿ ಜೂ.೭ರಂದು ಎರಡು ತಂಡಗಳ ನಡುವೆ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ಇತ್ತಂಡಗಳ ಐವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಟ್ವಾಳ ಮೂಡಾ ಗ್ರಾಮದ ನಿವಾಸಿಗಳಾದ ಹಬೀಬ್ ರಹಿಮಾನ್ (33), ಮುಹಮ್ಮದ್ ಶಾಹಿನ್ (26), ಮುಹಮ್ಮದ್ ನಿಸಾನ್ (28) ಹಾಗೂ ಇನ್ನೊಂದು ತಂಡದ ಅಬ್ದುಲ್ ಪೈಝಲ್ (30), ಮುಹಮ್ಮದ್ ಅರ್ಷದ್ (32) ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳನ್ನು ಜೂ. 18ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ವಿವರ:
ಜೂ.7ರಂದು ರಾತ್ರಿ ಕೈಕಂಬದಲ್ಲಿ ಇತ್ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಎರಡೂ ತಂಡಗಳ ಯುವಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ವಾಹನ, ಆಯುಧ ಸಹಿತ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಇದೀಗ ಬಂಧಿತ ಆರೋಪಿಗಳ ಸಂಖ್ಯೆ 6ಕ್ಕೇರಿದೆ.

More articles

Latest article