ಕಲ್ಲಡ್ಕ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ೨೦೧೯-೨೦ನೇ ಸಾಲಿನಲ್ಲಿ ಹೊಸದಾಗಿ ಶಾಲೆಗೆ ಸೇರಿದ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ನಡೆಯಿತು.
ಜೀವನ ಮೌಲ್ಯಗಳನ್ನು ತಿಳಿಸಬೇಕಾದುದು ಶಾಲೆಯ ಕರ್ತವ್ಯ.ಆದರೆ ಬ್ರಿಟಿಷರ ಆಳ್ವಿಕೆಯಿಂದ ಕೇವಲ ಭಾರತೀಯರನ್ನು ಗುಲಾಮರಾಗಿಸಿದರಲ್ಲದೇ ಭಾರತದ ನೈಜ ಶಿಕ್ಷಣವನ್ನು ಬದಲಾಯಿಸಿವುದರ ಮೂಲಕ ಭಾರತೀಯ ಮೂಲ ತತ್ವ, ಇತಿಹಾಸವನ್ನು ಬದಲಾಯಿಸಿದ್ದಾರೆ. ಆದರೆ ಈ ಶಾಲೆಯು ಭಾರತೀಯ ಸನಾತನ ಮಾದರಿಯ ಶಿಕ್ಷಣವನ್ನು ಮಗುವಿಗೆ ಕೊಡುವ ಧ್ಯೇಯವನ್ನು ಇಟ್ಟುಕೊಂಡು ಮುಂದುವರಿಸುತ್ತಾ ಬಂದಿದೆ.ಇಲ್ಲಿ ರಾಷ್ಟ್ರೀಯತೆಯನ್ನು ಕಲಿಸಿಕೊಡುತ್ತದೆ. ಸರ್ಕಾರಿ ಶಾಲೆಯನ್ನು ಆಂಗ್ಲಮಾಧ್ಯಮವನ್ನು ಮಾಡುವ ಮೂಲಕ ಕನ್ನಡವನ್ನು ಮೂಲೆ ಗುಂಪಾಗಿಸಿದೆ. ಆದರೆ ಈ ಶಾಲೆಯು ೧೦೦೦ ಕ್ಕೂ ಅಧಿಕ ಮಕ್ಕಳನ್ನುಹೊಂದಿ ಭಾಷಾ ಮಾಧ್ಯಮದಲ್ಲೆ ಹೆಚ್ಚು ಮಕ್ಕಳನ್ನು ಹೊಂದಿದ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|| ಪ್ರಭಾಕರ್ ಭಟ್ ಕಲ್ಲಡ್ಕ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಾ ನುಡಿದರು.
ಕಾರ್ಯಕ್ರಮವು ಅತಿಥಿ ಗಣ್ಯರಿಂದ ದೀಪ ಪ್ರಜ್ವಲನೆಯ ಮೂಲಕ ಆರಂಭವಾಯಿತು. ಒಂದನೇ ತರಗತಿಯ ವಿದ್ಯಾರ್ಥಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು. ಅವರಿಗೆ ಅಧ್ಯಾಪಕ ವೃಂದದವರು ಆರತಿ, ಅಕ್ಷತೆ ತಿಲಕಧಾರಣೆ ಮಾಡಿ ಸಿಹಿ ನೀಡಿದರು. ಹೊಸದಾಗಿ ಸೇರಿದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಘೃತಾಹುತಿಯನ್ನು ಮಾಡಿದರು. ನಂತರ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರಿಂದ ಆರ್ಶಿವಾದ ಪಡೆದರು.
ನಂತರ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತೀ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು
ವೇದಿಕೆಯಲ್ಲಿ ಓಂ ಸಾರಾ ಇನ್ಫ್ರಾ ಕಂಪನಿಯ ಮಾಲಕರಾದಂತಹ ಎಚ್,ಎನ್ ಚಂದ್ರಶೇಖರ್, ಕಾರ್ಕಳದ ಕಾರ್‍ಲ ಕನ್‌ಸ್ಟ್ರಕ್ಷನ್ ಕಂಪೆನಿಯ ಆಡಳಿತ ಪಾಲುದಾರರಾದ ಸೌಮ್ಯ ಶೆಟ್ಟಿ ಹಾಗೂ ದೇವದಾಸ್ ದಂಪತಿಗಳು, ಬಿ.ಎಸ್.ಎನ್.ಎಲ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಶ್ರೀಧರ್ ಭಟ್ ಗಿಲ್ಕಿಂಜ, ಮಂಡ್ಯದ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಕಿಶನ್ ಗೌಡ, ಕರ್ನಾಟಕ ಬ್ಯಾಂಕ್‌ನ ಪ್ರಾದೇಶಿಕ ಕಛೇರಿ ಮಂಗಳೂರಿನ ಅಸಿಸ್ಟೆಂಟ್ ಮ್ಯಾನೇಜರ್ ಚಂದ್ರಶೇಖರ್, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರಾದ ರಮೇಶ್, ಡಾ| ಕಮಲಾ ಪ್ರಭಾಕರ್ ಭಟ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚೆನ್ನಪ್ಪ ಕೋಟ್ಯಾನ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್ ಹಾಗೂ ಮುಖ್ಯಶಿಕ್ಷಕರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ರೇಷ್ಮಾ ಮಾತಾಜಿ ನಿರೂಪಿಸಿದರು ಹಾಗೂ ರೂಪಕಲಾ ಎಮ್ ಮಾತಾಜಿ ಸ್ವಾಗತಿಸಿದರು. ಕಾಂiiಕ್ರಮದಲ್ಲಿಶಾಲಾಭಿವೃದ್ದಿ ಸಮಿತಿ ಹಾಗೂ ಮಾತೃಭಾರತೀ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತಿಯಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here