Wednesday, September 27, 2023

ವಿವಿಧ ಕಾಮಗಾರಿಗೆ 2.40 ಕೋ.ರೂ.ಮಂಜೂರು: ಶಾಸಕ ರಾಜೇಶ್ ನಾಯ್ಕ್

Must read

ಬಂಟ್ವಾಳ: ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮರಣೆ ಮತ್ತು ಕರಿಯಂಗಳ ಗ್ರಾಮದ ಬಿಜೆಪಿ ಕಾರ್ಯಕರ್ತರೊಂದಿಗಿನ ಸಮಾಲೋಚನಾ ಸಭೆ ಸರ್ವಮಂಗಳ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ಯು.ರಾಜೇಶ್ ನಾಯ್ಕ್ ಅವರು,  ಕರಿಯಂಗಳ ಗ್ರಾಮದ ವಿವಿಧ ಬೇಡಿಕೆಯನ್ನು ಪರಿಗಣಿಸಿ  ಸುಮಾರು 2.40 ಕೋಟಿ ರೂ.ಗೂ ಮಿಕ್ಕಿ ವಿವಿಧ ಕಾಮಗಾರಿಗಳಿಗೆ ಅನುದಾನ ಮಂಜೂರಾತಿ ದೊರೆತಿದೆ ಎಂದರು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ 3 ಕೊಳವೆ ಬಾವಿಗೆ ಕೊರೆಯಲಾಗಿದೆ.
ಮುಂದಿನ ಅವಧಿಯಲ್ಲಿ ಆದ್ಯತೆ ಮೇರೆಗೆ ವಿವಿಧ ಕಾಮಗಾರಿಗಳಿಗೆ ಅನುದಾನವನ್ನು ಒದಗಿಸಲಾಗುವುದು ಎಂದು ಶಾಸಕ ಯು. ರಾಜೇಶ್ ನಾಯ್ಕ್ ಭರವಸೆ ನೀಡಿದರು. ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮಿತಿ ಉಪಾಧ್ಯಕ್ಷ ದೇವಪ್ಪ ಪೂಜಾರಿ, ತಾ.ಪ.ಸದಸ್ಯ ಯಶವಂತ ಪೊಳಲಿ,  ಮಾಜಿ ಸದಸ್ಯ  ವೆಂಕಟೇಶ್ ನಾವಡ,  ಪಂಚಾಯತ್ ಅಧ್ಯಕ್ಷೆ ಚಂದ್ರಾವತಿ, ಪಂಚಾಯತ್ ಸಮಿತಿ ಅಧ್ಯಕ್ಷ ಗೋಪಾಲ ಬಂಗೇರ, ಪಂಚಾಯತ್ ಸದಸ್ಯರು,ಕಾರ್ಯಕರ್ತರು ಉಪಸ್ಥಿತರಿದ್ದರು.

 

More articles

Latest article