ವಿಟ್ಲ: ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಕೇಪು ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘ, ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ, ಶಾಲಾ ಆರಂಭೋತ್ಸವ ಸಮಾರಂಭ ನಡೆಯಿತು.
ಸಭಾ ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಮಾತನಾಡಿ ಊರಿನ ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕರ ಸಮಾನ ಮನಸ್ಕರಾಗಿ ಹುಮ್ಮಸ್ಸಿನಿಂದ ಮುನ್ನಡೆದಾಗ ಶಾಲೆ ಉಜ್ವಲವಾಗಿ ಬೆಳೆಯಬಹುದು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೇಪು ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘದ ಸಂಚಾಲಕ ಅಶೋಕ್ ಕುಮಾರ್ ಇರಾಮೂಲೆ ಮಾತನಾಡಿ ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳು ಸರ್ವತೋಮುಖವಾಗಿ ಬೆಳೆಯುವ ವಾತಾವರಣ ಸೃಷ್ಟಿಯಾದಾಗ ಸರಕಾರಿ ಶಾಲೆಗಳತ್ತ ಹೆತ್ತವರ ಚಿತ್ತ ಹರಿಯಬಹುದು. ಈ ಸಾಲಿನಿಂದ ಎಲ್‌ಕೆಜಿಯುಕೆಜಿ ತರಗತಿಗಳು ಆರಂಭವಾಗಲಿದ್ದು, ಎಲ್ಲಾ ರೀತಿಯ ಸೌಕರ್‍ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯೆ ಕವಿತಾ ಎಸ್.ನಾಯ್ಕ, ನೋಟರಿ ವಕೀಲ ಶ್ರೀಕೃಷ್ಣ, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಶೀನ ನಾಯ್ಕ ಕಲ್ಲಾಪು, ಕೇಪು ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ಕಾರ್‍ಯಾಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಎಸ್‌ಡಿಎಂಸಿ ಅಧ್ಯಕ್ಷ ರವಿ ಗೌಡ ಕೊರತಿಗದ್ದೆ ಭಾಗವಹಿಸಿದ್ದರು.
ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಸರೋಜ ಕೆ. ವಂದಿಸಿದರು. ಸಹ ಶಿಕ್ಷಕಿ ಚಿನ್ನಮ್ಮ ಕಾರ್‍ಯಕ್ರಮ ನಿರೂಪಿಸಿದರು.
