Sunday, April 14, 2024

ಮಾಣಿ ಕುಲಾಲ ಸೇವಾ ಸಂಘದ ನೂತನ ಅಧ್ಯಕ್ಷ ಉಪಾಧ್ಯಕ್ಷ ಸಮಿತಿಯ ಪದಗ್ರಹಣ

ಬಂಟ್ವಾಳ: ಕುಲಾಲ ಸೇವಾ ಸಂಘ ಮಾಣಿ ಇದರ 2019-2020 ನೇ ಸಾಲಿನ ನೂತನ ಅಧ್ಯಕ್ಷ ಉಪಾಧ್ಯಕ್ಷ ಸಮಿತಿಯ ಪದಗ್ರಹಣ ಸಮಾರಂಭ ಮಾಣಿ ಕುಲಾಲ ಸೇವಾ ಸಂಘದ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷ ಚಂದು ಮಾಸ್ತರ್ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಂಘಟನೆಯ ಶಕ್ತಿಯಿಂದ ಕುಲಾಲ ಸಮಾಜದ ಅಭಿವೃದ್ಧಿ ಸಾಧ್ಯ, ಈ ನಿಟ್ಟಿನಲ್ಲಿ ಸಂಘಟನೆಯ ನ್ನು ಬಲಪಡಿಸಿ ಎಂದು ಅವರು ಹೇಳಿದರು.
ಸಕಾರಾತ್ಮಕ ವಾದ ಚಟುವಟಿಕೆಗಳನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗೋಣ.


ಸಮಾಜಮುಖಿ ಕಾರ್ಯಗಳನ್ನು ಮಾಡುವಾಗ ಹಿಂಜರಿಕೆ ಬಿಟ್ಟು , ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಮುಂದುವರಿಯರಿ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ನೂತನ ತಂಡಕ್ಕೆ ಶುಭಹಾರೈಸಿದರು. ಕಳೆದ ಬಾರಿಯ ದಾಖಲೆ ಪತ್ರಗಳನ್ನು ನೂತನ‌ ಅಧ್ಯಕ್ಷ ಬೋಜನಾರಾಯಣ ಹಾಗೂ ಕಾರ್ಯದರ್ಶಿ ಪದ್ಮನಾಭ ಅವರಿಗೆ ಹಸ್ತಾಂತರ ಮಾಡುವ ಮೂಲಕ ಅಧಿಕಾರ ಹಸ್ತಾಂತರ ನಡೆಯಿತು.
ಕಾರ್ಯದರ್ಶಿ ನಾರಾಯಣ ಕುಲಾಲ್ ಬಾಳ್ತಿಲ,  ನೂತನ‌ ಅಧ್ಯಕ್ಷ ಬೋಜನಾರಾಯಣ ಕುಲಾಲ್ ಗಣೇಶ್ ನಗರ ನೂತನ ಕಾರ್ಯದರ್ಶಿ ಪದ್ಮನಾಭ ಕುಲಾಲ್ ಕೊಮ್ಮಕೋಡಿ ಮತ್ತಿತರ ರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಮೇಶ್ ಬರಿಮಾರು ಸ್ವಾಗತಿಸಿ, ಯತಿರಾಜ್ ಮಿತ್ತಪೆರಾಜೆ ವಂದಿಸಿದರು. ಗೋಪಾಲಕೃಷ್ಣ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...