

ಬುಧವಾರ ಮೃತರ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಒಪ್ಪಿಸಲಾಯಿತು. ಮನೆಯಲ್ಲಿ ವಿಧಿ ವಿಧಾನಗಳು ಪೂರೈಸಿದ ಬಳಿಕ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಈ ಸಂದರ್ಭ ಇಡೀ ಗ್ರಾಮವೇ ಸೇರಿತ್ತು.
ಘಟನೆಯಿಂದ ಆಘಾತಕ್ಕೊಳಗಾಗಿದ್ದ ಗೋಪಾಲಕೃಷ್ಣ ಶೆಟ್ಟಿ ಅವರ ಪತ್ನಿ ಗಿರಿಜಾ ಶೆಟ್ಟಿ ಅವರನ್ನು ಪತಿ, ಪುತ್ರಿಯ ಅಂತ್ಯ ಸಂಸ್ಕಾರದ ಹಿನ್ನೆಲೆಯಲ್ಲಿ ಮನೆಗೆ ಕರೆತರಲಾಗಿದೆ.

ಅಂತ್ಯ ಸಂಸ್ಕಾರದ ವೇಳೆ ಮೆಸ್ಕಾಂನ ಅಧಿಕಾರಿಗಳ ಸಹಿತ ಹಲವಾರು ಗಣ್ಯರು, ರಾಜಕೀಯ ಮುಖಂಡರು ಉಪಸ್ಥಿತರಿದ್ದರು. ಅಂತಿಮ ನಮನ: ಸಂಸದ ನಳಿನ್ ಕುಮಾರ್ ಕಟೀಲು , ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾ.ಪಂ.ಸದಸ್ಯೆ ರತ್ನಾವತಿ ಜೆ.ಶೆಟ್ಟಿ, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ,ಜಿ.ಆನಂದ, ಸುಲೋಚನಾ ಜಿ.ಕೆ.ಭಟ್, ರಾಮದಾಸ ಬಂಟ್ವಾಳ ಹಾಗೂ ಪಕ್ಷದ ಸ್ಥಳೀಯ ಮುಖಂಡರು ಮತ್ತು ಗ್ರಾ.ಪಂ.ಅಧ್ಯಕ್ಷ ಯತೀಶ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು.