Wednesday, April 17, 2024

ಬಂಟ್ವಾಳ ಕ್ರೆ.ಕೋ.ಅಪ.ಸೊಸೈಟಿ ಅಧ್ಯಕ್ಷರಾಗಿ ರೈ ಆಯ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ.ಸಿ.ರೋಡನ್ನು ಕೇಂದ್ರೀಕರಿಸಿ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಬಂಟ್ವಾಳ ಕ್ರೆಡಿಟ್ ಕೋ -ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಮಾಜಿ ಸಚಿವ ರಮಾನಾಥ ರೈ ಅವರು ಆಯ್ಕೆಯಾಗಿದ್ದಾರೆ.   ಬುಧವಾರ ಸೊಸೈಟಿಯ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಳಿದಂತೆ ಉಪಾಧ್ಯಕ್ಷರಾಗಿ ಮಾಯಿಲಪ್ಪ ಸಾಲಿಯಾನ್,ನಿರ್ದೇಶಕರುಗಳಾಗಿ ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಪದ್ಮಶೇಖರ ಜೈನ್,ಎಂ.ಎಸ್.ಮಹಮ್ಮದ್,ಮಂಜುಳಾ ಮಾವೆ,ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ,ಭೂಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್,  ಪಿಯೂಸ್ ರೋಡ್ರಿಗಸ್, ಅಲ್ಪೋನ್ಸ್ ಮೆನೇಜಸ್,ನಾರಾಯಣ ನಾಯ್ಕ್,ಅಮ್ಮು ಅರ್ಬಿಗುಡ್ಡೆ,ವಾಣಿ ಪ್ರಕಾಶ್ ಅವರ ಆಯ್ಕೆಗೊಂಡಿದ್ದಾರೆ.ಸಹಕಾರ ಸಂಘದ ಅಧಿಕಾರಿ ತ್ರಿವೇಣಿ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.ಬಿ.ಸಿ.ರೋಡಿನಲ್ಲಿರುವ  ಕಾಂಗ್ರೆಸ್ ಭವನದ ಕಟ್ಟಡದಲ್ಲಿ ಈ ನೂತನ ಸೊಸೈಟಿಯ ಪ್ರಧಾನ ಕಚೇರಿ ಶೀಘ್ರದಲ್ಲಿಯೇ ಅಸ್ತಿತ್ವಕ್ಕೆ ಬರಲಿದೆ. ಮಾಜಿ ಸಚಿವ ರಮಾನಾಥ ರೈ ಅವರ ಸಾರಥ್ಯದಲ್ಲಿ ಆರಂಭವಾಗುವ ಈ ಸೊಸೈಟಿ ಭವಿಷ್ಯದಲ್ಲಿ ತಾಲೂಕಿನ ವಿವಿದೆಡೆಯಲ್ಲಿ ಶಾಖಯನ್ನು ತೆರೆಯುವ ಉದ್ದೇಶವನ್ನು ಹೊಂದಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್ ತಿಳಿಸಿದ್ದಾರೆ.-

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...