Saturday, April 20, 2024

ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ಬಗ್ಗೆ ಅರಿವು ಕಾರ್ಯಕ್ರಮ

ಬಂಟ್ವಾಳ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ ಮೂಲಕ ಮಕ್ಕಳ ರಕ್ಷಣಾ ವ್ಯವಸ್ಥೆ ಬಲ ಪಡಿಸುವುದು ತುರ್ತಾಗಿ ಮಾಡಬೇಕಾಗಿದೆ.ಎಂದು ದ ಕ ಜಿಲ್ಲಾ ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಉಮೇಶ್ ನಿರ್ಮಲ್ ಹೇಳಿದರು.
      ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಾವೂರು ಪಂಚಾಯತ್ ವ್ಯಾಪ್ತಿಯ ಸಮಿತಿ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಯಲು  ಕಾನೂನಿನ ಅರಿವು ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಸಭೆ ಯಲ್ಲಿ  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕುಮಾರ್ ಮಕ್ಕಳ ರಕ್ಷಣಾ ಸಮಿತಿ ಬಗ್ಗೆ ಮಾಹಿತಿ ನೀಡಿದರು. ಸಭೆ ಯ ಅಧ್ಯಕ್ಷತೆಯನ್ನು ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗುಲಾಬಿ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್, ಅಂಗನವಾಡಿ ಮೇಲ್ವಿಚಾರಕಿ ಸರೋಜ ಭಟ್, ಪೊಲೀಸ್ ಸಿಬ್ಬಂದಿ ಸುಂದರ್, ನಾವೂರು ಶಾಲಾ ಶಿಕ್ಷಕಿ ವೇದಾವತಿ, ಪಡಿ ಸಂಸ್ಥೆಯ ಸಂಯೋಜಕಿ ರಾಜೇಶ್ವರಿ ಉಪಸ್ತಿತರಿದ್ದರು.

More from the blog

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...