Friday, April 12, 2024

ಗೋಪುರ ನಿರ್ಮಾಣದ ಶಿಲಾನ್ಯಾಸ

ಬಂಟ್ವಾಳ: ಊರ ಪರ ಊರ ದಾನಿಗಳ ಸಹಕಾರದಿಂದ ಸುಮಾರು 1 ಕೋಟಿ ವೆಚ್ಚದಲ್ಲಿ ಸಜೀಪ ಮಾಗಣೆಗೆ ಸಂಬಂಧಿಸಿದ ಸಜೀಪ ಮೂಡ ಗ್ರಾಮದ ಸಂಕೇಶ ಎಂಬಲ್ಲಿರುವ ನಡಿಯೇಲು ದೈಯಂಗಳು ಉಳ್ಳಾಲ್ತಿ ಅಮ್ಮ ಮತ್ತು ನಾಲ್ಕೈತ್ತಾಯ ದೈವಗಳ ಭಂಡಾರದ ಮನೆಯ ನೂತನ ಗೋಪುರ ನಿರ್ಮಾಣ ಕ್ಕೆ ಇಂದು  ಬೆಳಿಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೇರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮ ವನ್ನು ಮಾಜಿ.ಜಿ.ಪಂ.ಆದ್ಯಕ್ಷ ಸಜೀಪ ಮಾಗಣೆಯ ಮುಖ್ಯಸ್ಥ ಸದಾನಂದ ಪೂಂಜಾ , ಗಡಿ ಪ್ರಧಾನರಾದ ಕಾಂತಾಡಿಗುತ್ತು ಬರಂಗರೆ ಗಣೇಶ ನಾಯ್ಕ್ ಯಾನೆ ಉಗ್ಗಶೆಟ್ಟಿ, ಸಜೀಪ ಗುತ್ತು ಗಡಿ ಪ್ರಧಾನ ರಾದ ಮುಂಡಪ್ಪ ಶೆಟ್ಟಿ ಯಾನೆ ಕೋಚು ಭಂಡಾರಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದ ರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸದಾನಂದ ಪೂಂಜಾ ಅವರು ದ.ಕ.ಜಿಲ್ಲೆಯ ಲ್ಲಿ ಆರಾಧಿಸಲ್ಪಡುವ ಅನೇಕ  ಕ್ಷೇತ್ರಗಳಿವೆ. ಆದರೆ
ಸಜೀಪ ಮೂಡದ ಸಂಕೇಶ ಭಂಡಾರದ ಮನೆಯಲ್ಲಿ ಅರಾಧಿಸುವ ಉಳ್ಳಾಲ್ತಿ ಕ್ಷೇತ್ರ ವೈಶಿಷ್ಟ್ಯ ತೆಯನ್ನು ಹೊಂದಿದೆ ಎಂದು ಅವರು ಹೇಳಿದರು.
ಈ ಕ್ಷೇತ್ರದ ಅಭಿವೃದ್ಧಿ ಗೆ ಎಲ್ಲರ ಸಹಕಾರ ಬೇಕು ಎಂದು ಅವರು ಹೇಳಿದರು. ವೇದಿಕೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಧ್ಯಕ್ಷ ಶ್ರೀ ಕಾಂತ ಶೆಟ್ಟಿ, ಸಂಕೇಶ , ಪ್ರಮುಖರಾದ ಸುಬ್ರಹ್ಮಣ್ಯ ಭಟ್, ವೆಂಕಟೇಶ್ ಬಟ್, ಜಯಶಂಕರ ಬಾಸ್ರಿತ್ತಾಯ, ನಗ್ರಿಗುತ್ತು ಜಯರಾಮ ಶೆಟ್ಟಿ, ಸಂಕಪ್ಪ ಶೆಟ್ಟಿ ಪಾಲಮಂಟಪ ಮನೆ, ಬಿಜಾಂದರ್ ಗುತ್ತು ಶಿವರಾಮ ಭಂಡಾರಿ, ಯಶವಂತ ದೇರಾಜೆ, ದೇವಿಪ್ರಸಾದ ಪೂಂಜಾ ಉಪಸ್ಥಿತರಿದ್ದರು.
ಮಾಜಿ ಜಿ.ಪಂ.ಅದ್ಯಕ್ಷ ಸದಾನಂದ ಪೂಂಜಾ ಸ್ವಾಗತಿಸಿ, ಶಿವಪ್ರಸಾದ್ ಮಾಸ್ಟರ್ ವಂದಿಸಿದರು.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...