ಸುರತ್ಕಲ್: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜಮುಖಿ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಲಿದೆ. ಅದಕ್ಕೆ ಎಲ್ಲರ ಸಹಕಾರವೂ ಬೇಕಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಕಾರದಲ್ಲಿ ಚೇಳ್ಯಾರ್ ಖಂಡಿಗೆ ಮತ್ತು ಬಾಳ ಒಟ್ಟೆಕಾಯರ್‌ನಲ್ಲಿ ನಿರ್ಮಿಸಿದ ಎರಡು ಮನೆಗಳಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.
ಸಮಾಜದಲ್ಲಿ ಬಡವರನ್ನು ಗುರುತಿಸಿ ವಿದ್ಯಾಭ್ಯಾಸಕ್ಕೆ, ವೈದ್ಯಕೀಯಕ್ಕೆ ಹಾಗೂ ಮನೆ ನಿರ್ಮಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೇ ಬಡವರಿಗೆ ಮನೆಯನ್ನು ನಿರ್ಮಿಸಿಕೊಡುವ ಕೆಲಸ ಕಾರ್ಯಗಳೂ ನಡೆದಿದೆ ಎಂದು ಅವರು ತಿಳಿಸಿದರು. ಬೇರೆ ಬೇರೆ ಬಂಟರ ಸಂಘಗಳಿಂದ ಬರುತ್ತಿರುವ ಅರ್ಜಿಗಳನ್ನು ಪರಿಶೀಲಿಸಿ ನೆರವು ನೀಡಲಾಗುತ್ತಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು.


ಚೇಳ್ಯಾರ್ ಖಂಡಿಗೆ ನಿವಾಸಿ ಹರೀಶ್ ಶೆಟ್ಟಿ ಮತ್ತು ಬಾಳ ಒಟ್ಟೆಕಾಯರ್ ನಿವಾಸಿ ವಿಜಯಲಕ್ಷ್ಮೀ ಶೆಟ್ಟಿ ಅವರಿಗೆ ಕಟ್ಟಿ ಕೊಡಲಾದ ಮನೆಯನ್ನು ಹಸ್ತಾಂತರಿಸಲಾಯಿತು. ಮನೆಯ ಕೀ ಯನ್ನು ಸುರತ್ಕಲ್ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ನೀಡಿದರು.
ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ ದಾಸ ಶೆಟ್ಟಿ, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜಾ ಹೊಸಬೆಟ್ಟು, ಉಪಾಧ್ಯಕ್ಷ ನವೀನ್ ಶೆಟ್ಟಿ ಪಡ್ರೆ, ಕಾರ್ಯದಶಿ ಲೋಕಯ್ಯ ಶೆಟ್ಟಿ ಮುಂಚೂರು, ಮಾಜಿ ಅಧ್ಯಕ್ಷ ಎಂ. ದೇವಾನಂದ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಖಂಡಿಗೆಬೀಡು ಆದಿತ್ಯ ಮುಕಾಲ್ದಿ, ಬಂಟರ ಸಂಘದ ಪದಾಧಿಕಾರಿಗಳಾದ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸುಧಾಕರ ಶೆಟ್ಟಿ ಚೆಳ್ಯಾರು, ಪ್ರವೀಣ್ ಶೆಟ್ಟಿ , ರತ್ನಾಕರ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಬೇಬಿ ಶೆಟ್ಟಿ, ಕಾರ್ಯದರ್ಶಿ ಚಿತ್ರಾ ಜೆ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here