Saturday, April 13, 2024

ತೋರಣಕಟ್ಟೆ: ನರ್ಸರಿ ತರಗತಿ ಆರಂಭ

ವಿಟ್ಲ: ಪುಣಚ ಗ್ರಾಮದ ತೋರಣಕಟ್ಟೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪೂರ್ವ ತರಗತಿಗಳ ಉದ್ಘಾಟನೆ ಗುರುವಾರ ನಡೆಯಿತು.
ತರಗತಿಯನ್ನು ಪುಣಚ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹೇಶ್ ಶೆಟ್ಟಿ ಉದ್ಘಾಟಿಸಿ ಗ್ರಾಮದ ಶಾಲೆ ಪ್ರಗತಿಪಥದಲ್ಲಿ ಸಾಗಲು ಪೋಷಕರ, ವಿದ್ಯಾಭಿಮಾನಿಗಳ ನಿರಂತರ ಸಹಕಾರ ಅವಶ್ಯಕವಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ತೋರಣಕಟ್ಟೆ ವಿದ್ಯಾಭಿಮಾನಿ ಸಮಿತಿ ಅಧ್ಯಕ್ಷ ವಿಶ್ವನಾಥ ಭಟ್ ಮಾತನಾಡಿ ಮುಚ್ಚಿ ಹೋಗಲಿರುವ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಈ ಶೈಕ್ಷಣಿಕ ಸಾಲಿನಿಂದ ಶಿಕ್ಷಣಪ್ರೇಮಿಗಳ ಸಹಕಾರದಿಂದ ಉಚಿತವಾಗಿ ಆಂಗ್ಲ ಮಾಧ್ಯಮ ನರ್ಸರಿ ಸ್ಕೂಲ್ ಆರಂಭಿಸಲಾಗಿದೆ ಎಂದರು.
ಪುಣಚ ಗ್ರಾಮ ಪಂಚಾಯಿತಿ ಸದಸ್ಯರಾದ ಪವಿತ್ರ ನಾಯಕ್, ಜಯರಾಮ ಕಾನ, ವಿದ್ಯಾಭಿಮಾನಿ ಸಮಿತಿ ಗೌರವಾಧ್ಯಕ್ಷ ಆಲ್ಬರ್ಟ್ ಡಿಸೋಜ, ಕಾರ್‍ಯದರ್ಶಿ ಟಿ.ಲೋಕೇಶ್ ನಾಯ್ಕ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಕವಿತ ಎಸ್. ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಲಕ್ಷ್ಮೀ ಪ್ರಭಾ, ವಿಜಯಲಕ್ಷ್ಮೀ ಸಹಕರಿಸಿದರು.

 

More from the blog

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...