Wednesday, April 10, 2024

ಶ್ರೀರಾಮ ಪದವಿ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಬಂಟ್ವಾಳ: ಶ್ರೀರಾಮ ಪದವಿ ಕಾಲೇಜಿನಲ್ಲಿ ವಿಶ್ವಯೋಗ ದಿನದ ಅಂಗವಾಗಿ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇದರ ಸಹಯೋಗದೊಂದಿಗೆ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘ ಇದರ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ  ಗಣಪತಿ ಹೆಗಡೆ ಇವರು ಯೋಗದ ಮಹತ್ವದ ಬಗ್ಗೆ ತಿಳಿಸುತ್ತಾ ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಆಗುವ ಧನಾತ್ಮಕ ಪರಿಣಾಮಗಳ ಬಗ್ಗೆ ತಿಳಿಯಪಡಿಸಿದರು.

ವಿದ್ಯಾರ್ಥಿಗಳಲ್ಲಿ ತಾಳ್ಮೆ, ಏಕಾಗ್ರತೆ, ಶಿಸ್ತು, ಸಂಯಮ ಮತ್ತು ಓದಿನಲ್ಲಿ ಯಶಸ್ಸನ್ನು ಸಾಧಿಸಲು ಯೋಗವು ಜೀವನದ ಅವಿಭಾಜ್ಯ ಅಂಗವಾಗಿರಬೇಕು. ಮತ್ತು ದೇಶವನ್ನು ವಿಶ್ವಗುರು ಸ್ಥಾನಕ್ಕೆ ಏರಿಸುವಲ್ಲಿ ಯೋಗದ ಪಾತ್ರವು ಪ್ರಮುಖವಾಗುವುದು ಎಂದರು.
ನಂತರ ಯೋಗದ ವಿವಿಧ ಆಸನಗಳ ಮಾಹಿತಿ ಮತ್ತು ತರಬೇತಿಯನ್ನು ಯೋಗ ತರಬೇತುದಾರರಾದ ಸುಪ್ರಿತಾ ಸಂಜಯ್ ಇವರು ನಡೆಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯ ವಿಭಾಗ ಉಪನ್ಯಾಸಕರಾದ ರಂಜಿತ್ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರ್ಥಶಾಸ್ತ್ರ ಉಪನ್ಯಾಸಕ ಹರೀಶ್ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಹರ್ಷಿತಾ ವಂದಿಸಿ, ಇಂಗ್ಲೀಷ್ ಉಪನ್ಯಾಸಕಿ ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.

More from the blog

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...