ಬಂಟ್ವಾಳ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇಲ್ಲಿ ಡೆಂಗ್ಯೂ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾಗಿರುವ ಡಾ.ದೀಪಕ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು. ಡೆಂಗ್ಯೂ ಜ್ವರದ ಲಕ್ಷಣಗಳು ಹಾಗೂ ಅದನ್ನು ನಿಯಂತ್ರಿಸುವ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಡೆಂಗ್ಯೂ ಜ್ವರದ ಲಕ್ಷಣಗಳುಳ್ಳವರನ್ನು ಹೇಗೆ ಉಪಚರಿಸಬೇಕು ಇತರರು ಎಂತಹ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡಿದರು. ಇದನ್ನು ತಡೆಗಟ್ಟಲು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದೆಂದು ಹೇಳಿದರು. ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಅವರೆಲ್ಲಾ ಪ್ರಶ್ನೆಗಳಿಗೆ ಪರಿಹಾರವನ್ನು ನೀಡಿದರು. ಡೆಂಗ್ಯೂ ಜ್ವರ ಮಾತ್ರವಲ್ಲದೆ ಇತರ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು. ಈ ಎಲ್ಲಾ ಮಾಹಿತಿಯನ್ನು ತಮ್ಮ ಊರಿನ, ಪರಿಸರದ ಎಲ್ಲರಿಗೆ ತಿಳಿಸುವ ಮೂಲಕ ಜನಸಾಮಾನ್ಯರಲ್ಲೂ ಜಾಗೃತಿ ಮೂಡಿಸಿ ಎಂಬುದಾಗಿ ಕರೆ ನೀಡಿದರು. ವೈದ್ಯಾಧಿಕಾರಿಗಳಾದ ಡಾ.ದೀಪಕ್ ಅವರೊಂದಿಗೆ ಡಾ. ಪೂಜಾ, ಡಾ.ನಿಶಾ, ಡಾ.ಕಾವ್ಯ, ಡಾ.ನಿಖಿತ ಇವರು ಪಾಲ್ಗೊಂಡು ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸಿ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸತ್ಯನಾರಾಯಣ ಭಟ್ ಇವರು ವಹಿಸಿದ್ದರು. ರೆಡ್‌ಕ್ರಾಸ್ ಹಾಗೂ ರಾಷ್ಟ್ರೀಯ ಸೇವಾಯೋಜನಾ ಘಟಕದ ಯೋಜನಾಧಿಕಾರಿಗಳಾದ ದೇವಿಪ್ರಸಾದ್ ಸಹಾಯಕ ಪ್ರಾಧ್ಯಾಪಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡೆಂಗ್ಯೂ ಹಾಗೂ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಮಾಹಿತಿಗಳುಳ್ಳ ಕರಪತ್ರಗಳನ್ನು ವಿತರಿಸಲಾಯಿತು.
197 ವಿದ್ಯಾರ್ಥಿಗಳು, ಬೋಧಕ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಗುರುಪ್ರಸಾದ್ ದ್ವಿತೀಯ ಬಿಎ ಎಲ್ಲರನ್ನೂ ಸ್ವಾಗತಿಸಿದರು. ದಿನೇಶ್ ದ್ವಿತೀಯ ಬಿಎ ಎಲ್ಲರಿಗೂ ವಂದಿಸಿದರು. ಪೂರ್ಣಿಮಾ, ವಿನಯ ಪ್ರಥಮ ಬಿಕಾಂ ಪ್ರಾರ್ಥಿಸಿದ ಈ ಕಾರ್ಯಕ್ರಮವನ್ನು ಪ್ರಜ್ವಲ್ ದ್ವಿತೀಯ ಬಿಕಾಂ ನಿರ್ವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here