ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಆಂಗ್ಲ ಉಪನ್ಯಾಸಕರ ಸಂಘದ ಮುಂದಿನ ಎರಡು ವರ್ಷದ ಅವಧಿಗೆ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ಆಂಗ್ಲ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಟಿ.ಕೆ.ರವೀಂದ್ರನ್ ಪುನರಾಯ್ಕೆಗೊಂಡಿದ್ದಾರೆ. ಮಂಗಳೂರಿನ ರೋಸಾರಿಯೋ ಪದವಿ ಕಾಲೇಜ್ ನಲ್ಲಿ ಈಚೆಗೆ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮಂಗಳೂರು ಬೆಸೆಂಟ್ ಮಹಿಳಾ ಕಾಲೇಜಿನ ಆಂಗ್ಲ ವಿಭಾಗದ ಸಹಪ್ರಾಧ್ಯಾಪಕಿ ಮೀರಾ ವಿಡ್ನ ಕೊಯೊಲೋ ಉಪಾಧ್ಯಕ್ಷರಾಗಿ, ವಿಟ್ಲ ಸರಕಾರಿ ಪದವಿ ಕಾಲೇಜಿನ ಆಂಗ್ಲವಿಭಾಗದ ಸಹಪ್ರಾಧ್ಯಾಪಕರಾದ ಡಾ.ಶ್ರೀಜ ಕಾರ್ಯದರ್ಶಿಯಾಗಿ, ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ಆಂಗ್ಲ ವಿಭಾಗದ ಸಹಪ್ರಾಧ್ಯಾಪಕಿಯಾದ ಶಾಂತಿರೋಶ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
