Thursday, April 18, 2024

’ಸುಸಂಸ್ಕೃತರ ಒಡನಾಟದಿಂದ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಬಹುದು’- ತುಂಗಪ್ಪ ಬಂಗೇರ

ವಿಟ್ಲ: ಮಕ್ಕಳ ಭವಿಷ್ಯತ್ತಿಗೆ ಬಡಜನರ ಕಷ್ಟ ಸುಖಗಳಿಗೆ ನಿರಂತರ ಸ್ಪಂದಿಸುವ ಮಾದರಿ ಸಂಘಟನೆಗಳಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ನಮ್ಮೆಲ್ಲರ ಮಧ್ಯೆ ಗುರುತಿಸಿಕೊಂಡಿದೆ. ವಿಕಾಸ ವಾಹಿನಿ ಸ್ವ-ಸಹಾಯ ಸಂಘಗಳು, ಘಟಸಮಿತಿ ಮುಖಾಂತರ ಸಾಮಾಜಿಕ ಸೇವಾ ಕಾರ್‍ಯಗಳು ನಡೆಯುತ್ತಿವೆ. ಸುಸಂಸ್ಕೃತರ ಒಡನಾಟದಿಂದ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಬಹುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ತಿಳಿಸಿದರು.
ಅವರು ಒಡಿಯೂರು ಶ್ರೀಗಳ ಜನ್ಮದಿನೋತ್ಸವದ ಅಂಗವಾಗಿ ಇರ್ವತ್ತೂರು ಘಟ ಸಮಿತಿ ವತಿಯಿಂದ ಮೂಡಪಡುಕೋಡಿ ಸರಕಾರಿ ಹಿರಿಯ ಪ್ರಥಮಿಕ ಶಾಲೆಯ ರಂಗಮಂದಿರದಲ್ಲಿ ನಡೆದ ಪುಸ್ತಕ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ಪ್ರಸ್ತಾವನೆಗೈದು ಪೂಜ್ಯ ಶ್ರೀಗಳ ಜನ್ಮದಿನೋತ್ಸವ ಗ್ರಾಮೋತ್ಸವ ಆಚಾರಣೆಯ ಉದ್ದೇಶಗಳನ್ನು ತಿಳಿಸಿದರು. ಈ ಸಂದರ್ಭ 60ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಹಾಫ್ ಕಾಮ್ಸ್ ಮಂಗಳೂರು ಇದರ ಅಧ್ಯಕ್ಷ ಕೆ. ಲಕ್ಷ್ಮೀ ನಾರಾಯಣ ಉಡುಪ, ಧನ್ವಂತರಿ ಕ್ಲಿನಿಕ್ ಡಾ. ರಾಮಕೃಷ್ಣ ಎಸ್, ಇರ್ವತ್ತೂರು ಗ್ರಾಮಪಂಚಾಯಿತಿ ಉಪಾಧ್ಯಕ್ಷರಾದ ಶಂಕರಶೆಟ್ಟಿ ಬೆದ್ರಮಾರ್, ಸದಸ್ಯರಾದ ಸುಧೀರ್ ಶೆಟ್ಟಿ ಎರ್ಮೆನಾಡು, ದಯಾನಂದ ಕುಲಾಲ್, ಎಸ್.ಡಿ.ಎಮ್.ಸಿ ಇದರ ಅಧ್ಯಕ್ಷರಾದ ಶ್ರೀನಿವಾಸ, ಶಾಲಾ ಸಹ ಶಿಕ್ಷಕರಾದ ಸುನೀಲ್ ಸಿಕ್ವೇರಾ, ದಲಿತ ಸಂಘಟನಾ ಸಮಿತಿ ನೇರಳಕಟ್ಟೆ ಇದರ ಅಧ್ಯಕ್ಷರಾದ ಸುಂದರ್ ಸಾಲ್ಯನ್, ಶ್ರೀದುರ್ಗಾ ಫ್ರೆಂಡ್ಸ್ ಕಲ್ಲಡ್ಕ ಇದರ ಅಧ್ಯಕ್ಷರಾದ ರಮೇಶ್, ಶಿವಾಜಿ ಫ್ರೆಂಡ್ಸ್ ಇರ್ವತ್ತೂರು ಇದರ ಸದಸ್ಯರಾದ ದಯಾನಂದ, ಚೆನ್ನೈತ್ತೋಡಿ ಘಟ ಸಮಿತಿ ಅಧ್ಯಕ್ಷರಾದ ಹರೀಶ್, ಪಿಲಾತಬೆಟ್ಟು ಘಟ ಸಮಿತಿ ಅಧ್ಯಕ್ಷರಾದ ಮೋಹನ್ ಸಾಲ್ಯಾನ್, ಇರ್ವತ್ತೂರು ಘಟ ಸಮಿತಿ ಅಧ್ಯಕ್ಷರಾದ ಗಂಗಯ್ಯ ಡಿ.ಎನ್, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ನಿರ್ದೇಶಕರಾದ ಕಿರಣ್ ಉರ್ವ, ಸಂಯೋಜಕಿ ಜಯಶ್ರೀಯವರು ಉಪಸ್ಥಿತರಿದ್ದರು.
ಜತೆ ಕಾರ್‍ಯದರ್ಶಿ ಮೋಹಿನಿ ಆಶಯ ಗೀತೆ ಹಾಡಿದರು. ಘಟ ಸಮಿತಿ ಸಂಘಟನಾ ಕಾರ್‍ಯದರ್ಶಿ ಸುಧಾಕರ ಸ್ವಾಗತಿಸಿದರು. ಕಾರ್‍ಯದರ್ಶಿ ಶೇಖರ್ ವಂದಿಸಿದರು. ಗ್ರಾಮದ ಸೇವಾದೀಕ್ಷಿತೆ ವಿಜಯ ಕಾರ್‍ಯಕ್ರಮ ನಿರೂಪಿಸಿದರು. ಸೇವಾದೀಕ್ಷಿತೆ ಪುಷ್ಪಾವತಿ, ಘಟಸಮಿತಿ ಪದಾಧಿಕಾರಿಗಳು, ಗುಂಪಿನ ಸದಸ್ಯರು ಸಹಕರಿಸಿದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...