Tuesday, April 9, 2024

ತಂತ್ರಜ್ಞಾನದ ಬಳಕೆ ಮಿತಗೊಳಿಸಿ ಪ್ರಾಕೃತಿಕ ಜೀವನದ ಸೊಗಡನ್ನು ಅನುಭವಿಸಿದಲ್ಲಿ ವಿದ್ಯಾರ್ಥಿ ಜೀವನ ಸಾರ್ಥಕ: ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಲು ಬೇಕಾಗುವ ತರಬೇತಿಯನ್ನು ಈ ಶಿಕ್ಷಣ ಸಂಸ್ಥೆಯು ನೀಡುತ್ತಿದ್ದು ಅವಕಾಶಗಳು ಹೆಚ್ಚುತ್ತಿರುವ ಮುಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆ ಮಾಡಲು ನಿಶ್ಚಯಿಸಿರುವುದು ವಿದ್ಯಾರ್ಥಿಗಳ ಸೌಭಾಗ್ಯ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಹೇಳಿದರು.
ಅವರು ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ದಶಮಾನೋತ್ಸವ ವರ್ಷ 2019- 2020ನೇ ಸಾಲಿನ ಪ್ರಣವ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳನ್ನು ಉದ್ಘಾಟಿಸಿ ತಂತ್ರಜ್ಞಾನದ ಬಳಕೆ ಮಿತಗೊಳಿಸಿ ಪ್ರಾಕೃತಿಕ ಜೀವನದ ಸೊಗಡನ್ನು ಅನುಭವಿಸಿದಲ್ಲಿ ವಿದ್ಯಾರ್ಥಿ ಜೀವನ ಸಾರ್ಥಕ ಎಂದು ಅವರ ವಿದ್ಯಾರ್ಥಿ ಜೀವನದ ಸವಿನೆನಪನ್ನು ಮೆಲುಕು ಹಾಕುತ್ತಾ ಜೀವನದಲ್ಲಿ ಉತ್ತಮ ನಡವಳಿಕೆಯನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳಿದರು. ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯ ಚೆನ್ನಪ್ಪ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ದಶಮಾನೋತ್ಸವದ ಪ್ರಯುಕ್ತ 10 ಜನಪ್ರತಿನಿಧಿಗಳ ಉಪಸ್ಥಿತಿ ಈ ಕಾರ್ಯಕ್ರಮದ ವಿಶೇಷತೆಯಾಗಿತ್ತು. ಅಭ್ಯಾಗತರಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಲೋಚನಾ ಭಟ್, ಪುತ್ತೂರು ತಾಲೂಕಿನ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಜಿಲ್ಲಾ ಎಸ್ಸಿ ಮೋರ್ಚಾದ ಅಧ್ಯಕ್ಷ ಹಾಗೂ ಮಾಜಿ ತಾಲೂಕು ಪಂಚಾಯತ್ ಸದಸ್ಯ ದಿನೇಶ್ ಅಮ್ಟೂರು, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ್ ನಾಯ್ಕ, ಬಂಟ್ವಾಳ ಪುರಸಭಾ ಸದಸ್ಯ ಜಯರಾಮ ಜಿ, ಗೋಳ್ತಮಜಲು ಕ್ಷೇತ್ರ ಜಿಲ್ಲಾ ಪಂಚಾಯತ್ ಸದಸ್ಯೆ  ಕಮಲಾಕ್ಷಿ ಕೆ ಪೂಜಾರಿ, ಉಪ್ಪಿನಂಗಡಿ ಕ್ಷೇತ್ರ ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ್, ಗೋಳ್ತಮಜಲು ತಾಲೂಕು ಪಂಚಾಯತ್ ಸದಸ್ಯೆ ಲಕ್ಷ್ಮೀ ಗೋಪಾಲಾಚಾರ್ಯ ಆಗಮಿಸಿದ್ದರು.
ಕಾಲೇಜಿನ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಅಂತಿಮ ಬಿ.ಕಾಂ ವಿದ್ಯಾರ್ಥಿ ನಿತೇಶ್ ಕುಮಾರ್ ಹಾಗೂ ಬಹುಮತ ಪಡೆದು ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾದ ಅಂತಿಮ ಬಿಕಾಂ ವಿದ್ಯಾರ್ಥಿನಿ ರಶ್ಮಿತಾ ಎಮ್. ಎಸ್., ಜತೆಕಾರ್ಯದರ್ಶಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಯಜ್ಞಶ್ರೀ ಪ್ರಮಾಣ ವಚನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘಗಳಾದ ರಾಷ್ಟ್ರೀಯ ಸೇವಾ ಯೋಜನೆ, ವಾಣಿಜ್ಯ ಸಂಘ, ಸಾಹಿತ್ಯ ಸಂಘ, ಪರಿಸರ ಸಂಘ, ವಿಜ್ಞಾನ ಸಂಘ, ಸಾಂಸ್ಕೃತಿಕ ಸಂಘ, ಕ್ರೀಡಾ ಸಂಘ, ಮಾನವಿಕ ಸಂಘ ಮುಂತಾದ ಸಂಘದ ಪದಾಧಿಕಾರಿಗಳು ಪ್ರಮಾಣ ವಚನವನ್ನು ಸ್ವೀಕರಿಸಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿದ್ದರು. ಇತಿಹಾಸ ಉಪನ್ಯಾಸಕಿ ಶುಭಲತಾ ಚುನಾವಣಾ ವರದಿ ವಾಚಿಸಿದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಸಹನಿರ್ದೇಶಕ, ಅರ್ಥಶಾಸ್ತ್ರ ಉಪನ್ಯಾಸಕ ಸಚಿನ್ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ರಸಾಯನಶಾಸ್ತ್ರ ಉಪನ್ಯಾಸಕಿ ಕವಿತಾ ನಿರೂಪಿಸಿ, ಉಪನ್ಯಾಸಕ ಯತಿರಾಜ್ ವಂದಿಸಿದರು.

More from the blog

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...