Wednesday, April 10, 2024

ಕೇಪು: ವನಮಹೋತ್ಸವ

ವಿಟ್ಲ: ಕೇಪು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವನಮಹೋತ್ಸವ ಕಾರ್‍ಯಕ್ರಮ ನಡೆಯಿತು. ಕಾರ್‍ಯಕ್ರಮದಲ್ಲಿ ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಪಡಿಬಾಗಿಲು ಅಧ್ಯಕ್ಷತೆ ವಹಿಸಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ವನಮಹೋತ್ಸವದ ಬಗ್ಗೆ ಹಾಗೂ ಪರಿಸರ ಜಾಗೃತಿಯ ಬಗ್ಗೆ ಮಾಹಿತಿ ನೀಡಿದರು. ಶಾಲಾ ಸಹ ಶಿಕ್ಷಕಿ ನೀತಾ ಇವರು ವನಮಹೋತ್ಸವದ ಬಗ್ಗೆ ಸವಿವರವಾಗಿ ಮಾತನಾಡುತ್ತ ಮರಗಳ ಅಗತ್ಯತೆ ಹಾಗೂ ಪರಿಸರ ರಕ್ಷಣೆ ಬಗ್ಗೆ ಶಾಲಾ ಮಕ್ಕಳಿಗೆ ತಿಳಿಸಿದರು.
ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘದ ಕಾರ್‍ಯಾಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಹಿರಿಯರಾದ ದೇವದಾಸ ರೈ ಕೇಪುಗುತ್ತು, ಕಾರ್ಯಕಾರಿ ಸಮಿತಿ ಸದಸ್ಯರಾದ ವಿಷ್ಣು ಶರ್ಮ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಗೌಡ ಕೊರತಿಗದ್ದೆ ಹಾಗೂ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮೋಹಿನಿ ಕೇಪು ಇವರು ಉಪಸ್ಥಿತರಿದ್ದರು.
ಶಾಲಾ ಮುಖ್ಯಶಿಕ್ಷಕಿ ಸರೋಜ ಇವರು ಸ್ವಾಗತಿಸಿದರು. ಶ್ರೀ ಉಳ್ಳಾಲ್ತಿ ವಿದ್ಯಾವರ್ಧಕ ಸಂಘದ ಕಾರ್‍ಯದರ್ಶಿ ಉಮೇಶ ಗೌಡ ಇವರು ವಂದಿಸಿದರು. ಶಾಲಾ ಸಹ ಶಿಕ್ಷಕಿ ಚಿನ್ನಮ್ಮ ಕಾರ್ಯಕ್ರಮ ನಿರೂಪಿಸಿದರು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...