ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು ಮಾನ್ಯ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಹರ್ಷವರ್ಧನ್ ಇವರನ್ನು ಭೇಟಿಮಾಡಿ ಜುಲೈ 12, 2019 ರಂದು ಅಡಿಕೆ ಬಳಕೆಯ ಕುರಿತು ಚುಕ್ಕೆ ರಹಿತ ಪ್ರಶ್ನೆಗೆ ಸರ್ಕಾರವು ಅಡಿಕೆಯು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ನಲ್ಲಿರುವ ಅಫಿಡವಿಟ್ ನ್ನು ಉಲ್ಲೇಖ ಮಾಡಿ ನೀಡಿದ ಉತ್ತರದ ಬಗ್ಗೆ ಇಂದು ಸಚಿವರನ್ನು ಭೇಟಿಮಾಡಿ ಅಡಿಕೆಯಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂಬುದರ ಬಗ್ಗೆ ಕೇಂದ್ರ ತೋಟ ಬೆಳೆಗಳ ಸಂಶೋಧನಾ ಸಂಸ್ಥೆಯು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಲಾಗಿದೆ ಎಂಬುವುದು ಸಚಿವರಿಗೆ ಸಂಸದರು ತಿಳಿಸಿದರು.

ಈ ಬಗ್ಗೆ ಸ್ಪಂದಿಸಿದ ಸಚಿವರು ಅಡಿಕೆಯು ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯು.ಪಿ.ಎ ಸರಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವುದರಿಂದ ಈ ಅಫಿಡವಿಟ್ ನ್ನು ಹಿಂದಕ್ಕೆ ಪಡೆದುಕೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದರು ಮತ್ತು ಸುಪ್ರೀಂ ಕೋರ್ಟ್ ನಿಂದ ಅಫಿಡವಿಟ್ ನ್ನು ಹಿಂದಕ್ಕೆ ಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಂಸದರ ನಿಯೋಗದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದೆ ಕುಮಾರಿ ಶೋಭಾ ಕರಂದ್ಲಾಜೆ, ದಾವಣಗೆರೆ ಸಂಸದ ಹಾಗೂ ಮಾಜಿ ಸಚಿವ ಶ್ರೀ.ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ಶ್ರೀ.ನಾರಾಯಣ ಸ್ವಾಮಿ ಮುಂತಾದವರಿದ್ದರು

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here