Saturday, April 6, 2024

ನೇತ್ರಾವತಿ ನೀರಿನ ಮಟ್ಟ 5.1 ಮೀ

ಬಂಟ್ವಾಳ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೇತ್ರಾವತಿ ನದಿಯ ನೀರಿನ ಏರಿಕೆ ಯಾಗಿದೆ.
ಸಂಜೆಯ ವೇಳೆ ಗೆ ನೇತ್ರಾವತಿ ನೀರಿನ ಮಟ್ಟ 5.1 ಮೀ ಮುಟ್ಟಿದೆ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 5.6 ಮೀ ಗೆ ಏರಿಕೆಯಾಗಿತ್ತು.
ಬೆಳಿಗ್ಗೆ ಯಿಂದ ಕೊಂಚ ಮಳೆ ಕಡಿಮೆಯಾಗಿದ್ದರಿಂದ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ಬಾರಿ ಈ ಸಮಯದಲ್ಲಿ ಎರಡು ಬಾರಿ ನೆರೆ ಬಂದಿತ್ತು. ನೇತ್ರಾವತಿ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ಕೂಡ ತಲುಪಿತ್ತು. ಆದರೆ ಈ ಬಾರಿ ಮಳೆ ಕಡಿಮೆ ಯಾಗಿದ್ದರಿಂದ ನೇತ್ರಾವತಿ ನದಿ ಸರಿಯಾಗಿ ತುಂಬಿಲ್ಲ.
ಅಲ್ಲಲ್ಲಿ ಮರಳು ದಿಬ್ಬಗಳು ಕಾಣುತ್ತಿದ್ದು ಕರಾವಳಿಯ ಜನರು ನೀರಿನ ಅಭಾವ ತಲೆದೋರುತ್ತದೆ ಎಂಬ ಹೆದರಿಕೆಯಲ್ಲಿದ್ದರು.
ಆದರೆ ಕಳೆದ ಎರಡು ದಿನಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜನತೆ ಕೊಂಚ ರಿಲೀಫ್ ಅಗಿದ್ದಾರೆ.
ರೈತರು ಕೃಷಿ ಚಟುವಟಿಕೆ ಯಲ್ಲಿ ತೊಡಗಿಸಲು ಮಳೆ ಅನುಕೂಲವಾಗಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...