Sunday, April 7, 2024

ಬಂಟ್ವಾಳ: ರಾಷ್ಟ್ರೀಯ ಶಿಕ್ಷಣ ನೀತಿ ಸಂವಾದ

ಬಂಟ್ವಾಳ: ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2019 (ಕರಡು) ಕುರಿತು ಗುರುವಾರ ಬಂಟ್ವಾಳ ಶಿಕ್ಷಣಾಧಿಕಾರಿ ಕಚೇರಿಯ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
 ಪಡಿ ನಿರ್ದೇಶಕ ರೆನ್ನಿ ಡಿಸೋಜ ಅವರು, ಶಿಕ್ಷಣ ನೀತಿ ಕುರಿತು ಶಿಕ್ಷಕರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯ ಅವಶ್ಯಕತೆ, ಪ್ರಮುಖ ಪಾತ್ರ, ಶಿಕ್ಷಕರ ಸಹಭಾಗಿತ್ವ ವಿಚಾರದ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಶಿಕ್ಷಣ, ಶಿಕ್ಷಕರ ಶಿಕ್ಷಣ ಮತ್ತು ತರಬೇತಿ, ಪ್ರಾರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣವನ್ನು ಬಲಪಡಿಸುವಿಕೆ, ಎಲ್ಲಾ ಮಕ್ಕಳಲ್ಲೂ ಸಾರಕ್ಷತೆ ಮತ್ತು ಗಣಿತ ಕೌಶಲಗಳ ಭದ್ರ ಬುನಾದಿ ರೂಪಿಸುವಿಕೆ, ಶಿಕ್ಷಣದ ಎಲ್ಲಾ ಮಟ್ಟದಲ್ಲೂ ಸಾರ್ವತ್ರಿಕ ಪ್ರವೇಶ ಮತ್ತು ಧಾರಣತೆಯನ್ನು ಕಾಪಾಡುವಿಕೆ, ಶಾಲಾ ಶಿಕ್ಷಣಕ್ಕಾಗಿ ಹೊಸ ಪಠ್ಯಕ್ರಮ ಮತ್ತು ಬೋಧನಾ ಕ್ರಮ ಮತ್ತಿತರ ಪ್ರಮುಖ ಅಂಶಗಳ ಕುರಿತು ಚರ್ಚಿಸಲಾಯಿತು.
 ಸಮೂಹ ಸಂಪನ್ಮೂಲ ಕೇಂದ್ರದ ಮುಖ್ಯಸ್ಥರು, ಕ್ಲಸ್ಟರ್ ಮುಖ್ಯಸ್ಥರು, ಶಾಲಾ ಮುಖ್ಯಶಿಕ್ಷಕರು ಹಾಗೂ ಆಯ್ದ ಶಿಕ್ಷಕರು ಸಂವಾದದಲ್ಲಿ ಭಾಗವಹಿಸಿದರು.
 ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್, ಪಂಚಾಯತ್ ರಾಜ್ ತರಬೇತಿದಾರ ಮಂಜು ವಿಟ್ಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಫಾರೂಕ್ ಬಂಟ್ವಾಳ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ವಂದಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...