Friday, April 5, 2024

ಕೊಡಂಗಾಯಿ: ಅಬ್ಬಾಸ್ ಉಸ್ತಾದ್ ಅನುಸ್ಮರಣೆ ಕಾರ್ಯಕ್ರಮ

ವಿಟ್ಲ: ಕೊಡಂಗಾಯಿ ಟಿಪ್ಪುನಗರದ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವತಿಯಿಂದ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅನುಸ್ಮರಣೆ ಕಾರ್ಯಕ್ರಮ ದಾರುನ್ನಜಾತ್ ಸಭಾ ಭವನದಲ್ಲಿ ಜರಗಿತು.

ದಾರುನ್ನಜಾತ್ ಅಧ್ಯಕ್ಷ ಪಿ.ಕೆ.ಅಬೂಬಕರ್ ಮುಸ್ಲಿಯಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಾರುನ್ನಜಾತ್ ಶರೀಅತ್ ಕಾಲೇಜು ಪ್ರಿನ್ಸಿಪಾಲ್ ಅಬ್ದುಲ್ ಖಾದರ್ ಫೈಝಿ ಉದ್ಘಾಟಿಸಿದರು. ದಾರುನ್ನಜಾತ್ ಮುದರ್ರಿಸ್ ಮುಹಮ್ಮದ್ ಅಲ್ ಪಾಳಿಲಿ ಅನುಸ್ಮರಣಾ ಪ್ರಭಾಷಣ ಮಾಡಿದರು.
ಎಸ್‌ಎಂಎ ರಾಜ್ಯ ಉಪಾಧ್ಯಕ್ಷ ಹಾಜಿ ಹಮೀದ್ ಕೊಡಂಗಾಯಿ ಪ್ರಾಸ್ತಾವಿಸಿದರು. ವಾಲೆಮುಂಡೋವು ಉಸ್ತಾದ್ ದಿಕ್ರ್ ಮಜ್ಲಿಸಿಗೆ ನೇತೃತ್ವ ನೀಡಿದರು. ಈ ಸಂದರ್ಭದಲ್ಲಿ ದಾರುನ್ನಜಾತ್ ಅಬುಧಾಬಿ ಸಮಿತಿ ಅಧ್ಯಕ್ಷ ಯೂಸುಫ್, ಎಸ್‌ಎಂಎ ವಿಟ್ಲ ರೀಜನಲ್ ಅಧ್ಯಕ್ಷ ಹಾಜಿ ಉಸ್ಮಾನ್, ಯೂಸುಫ್ ಹಾಜಿ ಕಡಂಬು, ಎಸ್‌ವೈಎಸ್ ಟಿಪ್ಪುನಗರ ಅಧ್ಯಕ್ಷ ಇಬ್ರಾಹಿಂ, ಹಾಫಿಲ್ ಶರೀಫ್ ಮುಸ್ಲಿಯಾರ್, ಇಬ್ರಾಹಿಂ ಮುಸ್ಲಿಯಾರ್, ಹಮೀದ್ ಎಸ್. ಉಪಸ್ಥಿತರಿದ್ದರು. ಅಬ್ದುರ್ರಝಾಕ್ ಸಅದಿ ಕೊಡಿಪ್ಪಾಡಿ ಸ್ವಾಗತಿಸಿದರು. ನಾಸಿರ್ ವಂದಿಸಿದರು.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.